alex Certify
ಕನ್ನಡ ದುನಿಯಾ       Mobile App
       

Kannada Duniya

‘ಆಯುಷ್ಮಾನ್ ಭಾರತ್’ ಯೋಜನೆ ಕುರಿತು ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ಬಡವರಿಗೆ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ಯೋಜನೆಯಡಿ ಶೇ. 68 ಮಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭಿಸಿದೆ.

ಸೆ. 23ರಿಂದ ಯೋಜನೆ ಕಾರ್ಯರೂಪಕ್ಕೆ ಬಂದಿದ್ದು, ಇದುವರೆಗೆ 2,32,592 ಮಂದಿ ಚಿಕಿತ್ಸೆ ಪಡೆದಿದ್ದಾರೆ. ಆ ಪೈಕಿ ಶೇ. 68 ಮಂದಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭಿಸಿದೆ. ಇನ್ನು ಇದುವರೆಗಿನ ಫಲಾನುಭವಿಗಳಲ್ಲಿ ಶೇ. 42 ಮಹಿಳೆಯರು ಎಂಬುದನ್ನು ನ್ಯಾಷನಲ್ ಹೆಲ್ತ್ ಏಜೆನ್ಸಿ ವರದಿ ತಿಳಿಸಿದೆ.

ಜನರಲ್ ಸರ್ಜರಿ, ಕಣ್ಣು, ಬಾಯಿ ಹಾಗೂ ಸ್ತ್ರೀಯರಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಫಲಾನುಭವಿಗಳು ಈ ಯೋಜನೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ವಿಶೇಷ ಎಂದರೆ ಯೋಜನೆ ಪ್ರಯೋಜನ ಪಡೆದ ರಾಜ್ಯಗಳ ಪೈಕಿ ಗುಜರಾತ್ ಮುಂಚೂಣಿಯಲ್ಲಿದೆ. ಅತಿಹೆಚ್ಚು ಫಲಾನುಭವಿಗಳು ಕಂಡುಬಂದಿರುವ ಟಾಪ್-5 ರಾಜ್ಯಗಳ ಪಟ್ಟಿಯಲ್ಲಿ ಕ್ರಮವಾಗಿ ಗುಜರಾತ್, ತಮಿಳುನಾಡು, ಮಹಾರಾಷ್ಟ್ರ, ಛತ್ತೀಸ್‍ಗಢ ಮತ್ತು ಪಶ್ಚಿಮ ಬಂಗಾಳ ಇವೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...