alex Certify
ಕನ್ನಡ ದುನಿಯಾ       Mobile App
       

Kannada Duniya

ವರುಣನ ರುದ್ರ ನರ್ತನಕ್ಕೆ 70 ಬಲಿ: ಭೋರ್ಗರೆಯುತ್ತಿವೆ ಯಮುನಾ, ಗಂಗಾ

ಉತ್ತರ ಪ್ರದೇಶದಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಸತತ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದೆ. ಭಾರೀ ಮಳೆಯಿಂದಾಗಿ ನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಮಟ್ಟ ತಲುಪಿವೆ. ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಈವರೆಗೆ 70 ಮಂದಿ ಬಲಿಯಾಗಿದ್ದಾರೆ.

ಕಾನ್ಪುರದಲ್ಲಿ ಗಂಗೆ ಅಬ್ಬರ ಜೋರಾಗಿದೆ. ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಮಳೆಯಿಂದಾಗಿ 77ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಸಹರಾನ್ಪುರದಲ್ಲಿ 11ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ. ಜನರಿಗೆ ಸೂಕ್ತ ರಕ್ಷಣೆ ನೀಡುವಂತೆ ಸಿಎಂ ಯೋಗಿ ಆದಿತ್ಯನಾಥ್ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗಾಯಾಳುಗಳಿಗೆ ಆರ್ಥಿಕ ನೆರವು ನೀಡುವಂತೆ ಸಿಎಂ ಆದೇಶ ಹೊರಡಿಸಿದ್ದಾರೆ.

ಇತ್ತ ರಾಷ್ಟ್ರ ರಾಜಧಾನಿ ದೆಹಲಿಯಲ್ಲೂ ಧಾರಾಕಾರ ಮಳೆಯಾಗ್ತಿದೆ. ಯಮುನಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಈ ಕಾರಣಕ್ಕಾಗಿ ಕಬ್ಬಿಣದ ಸೇತುವೆ ಮೇಲಿನ ರೈಲು ಸಂಚಾರವನ್ನು ಬಂದ್ ಮಾಡಲಾಗಿದೆ. ಪ್ರತಿದಿನ ಈ ಸೇತುವೆ ಮೇಲೆ 150ಕ್ಕೂ ಹೆಚ್ಚು ರೈಲುಗಳು ಸಂಚರಿಸುತ್ತಿದ್ದವು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...