alex Certify
ಕನ್ನಡ ದುನಿಯಾ       Mobile App
       

Kannada Duniya

ಸರ್ಕಾರಿ ನೌಕರರಿಗೆ ಏಪ್ರಿಲ್ ನಲ್ಲಿ ಸಿಗಲಿದೆ ಸಿಹಿ ಸುದ್ದಿ…!

ಕೊನೆಗೂ ಲಕ್ಷಾಂತರ ಸರ್ಕಾರಿ ನೌಕರರ ಬೇಡಿಕೆ ಈಡೇರುವ ಸಮಯ ಹತ್ತಿರ ಬಂದಿದೆ. ಏಪ್ರಿಲ್ ನಲ್ಲಿ ಕೇಂದ್ರ ಸರ್ಕಾರ, ನೌಕರರಿಗೆ ಸಿಹಿ ಸುದ್ದಿ ಕೊಡಲಿದೆ. 7ನೇ ವೇತನ ಆಯೋಗದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರಿ ನೌಕರರ ವೇತನ ಹೆಚ್ಚಳಕ್ಕೆ ಮುಂದಾಗಿದೆ.

ಸದ್ಯ ಕನಿಷ್ಟ ವೇತನ 18,000 ರೂಪಾಯಿ ಇದ್ದು, ಅದನ್ನು 21,000 ರೂಪಾಯಿಗೆ ಹೆಚ್ಚಳ ಮಾಡಲು ಕೇಂದ್ರ ನಿರ್ಧರಿಸಿದೆ ಎನ್ನಲಾಗ್ತಿದೆ. ಎಪ್ರಿಲ್ ತಿಂಗಳಿನಿಂದ್ಲೇ ಕೇಂದ್ರ ಸರ್ಕಾರಿ ನೌಕರರ ಕನಿಷ್ಟ ವೇತನದಲ್ಲಿ 3000 ರೂಪಾಯಿ ಹೆಚ್ಚಳವಾಗುವ ಸಾಧ್ಯತೆ ಇದೆ.

ಕನಿಷ್ಟ ವೇತನವನ್ನು 7000-18,000 ರೂಪಾಯಿಗೆ ಏರಿಕೆ ಮಾಡಬೇಕೆಂಬ 7ನೇ ವೇತನ ಆಯೋಗದ ಶಿಫಾರಸ್ಸನ್ನು ಕಳೆದ ವರ್ಷವೇ ಕೇಂದ್ರ ಸಚಿವ ಸಂಪುಟ ಒಪ್ಪಿಕೊಂಡಿತ್ತು. ಗರಿಷ್ಠ ವೇತನವನ್ನು 2.5 ಲಕ್ಷ ರೂಪಾಯಿಗೆ ಏರಿಕೆ ಸಹ ಮಾಡಲಾಗಿತ್ತು. ಆದ್ರೆ ಕನಿಷ್ಟ ವೇತನವನ್ನು 26,000 ರೂಪಾಯಿಗೆ ಹೆಚ್ಚಳ ಮಾಡಬೇಕೆಂದು ನೌಕರರು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...