alex Certify
ಕನ್ನಡ ದುನಿಯಾ       Mobile App
       

Kannada Duniya

ದೇವಾಲಯದಿಂದ ವಾಪಸ್ ಬರುತ್ತಿರುವಾಗ್ಲೇ ಭಗವಂತನ ಪಾದ ಸೇರಿದ 8 ಭಕ್ತರು

ಚಂಡೀಗಢ-ಮನಾಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಎಸ್ ಯು ವಿ ನಿಯಂತ್ರಣ ತಪ್ಪಿ ಕಣಿವೆಗೆ ಬಿದ್ದಿದ್ದರಿಂದ ಪಂಜಾಬ್ ಮೂಲದ 8 ಭಕ್ತರು ಸಾವನ್ನಪ್ಪಿದ್ದಾರೆ. ಹಿಮಾಚಲ ಪ್ರದೇಶದ ಬಿಸ್ಲಾಪುರ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತ ಇದು.

ಮೃತರು ಅಮೃತಸರ ಮೂಲದವರು. ಕುಲುವಿನಲ್ಲಿರುವ ಸಿಖ್ಖರ ಪವಿತ್ರ ಸ್ಥಳ ಮಣಿಕರಣ್ ನಲ್ಲಿ ಪೂಜೆ ಸಲ್ಲಿಸಿ ವಾಪಸ್ಸಾಗುತ್ತಿದ್ರು. ಅಪಘಾತದಲ್ಲಿ 8 ಮಂದಿ ದುರ್ಮರಣಕ್ಕೀಡಾಗಿದ್ದು, ಗಾಯಗೊಂಡಿರುವ ಓರ್ವನ ಸ್ಥಿತಿ ಚಿಂತಾಜನಕವಾಗಿದೆ.

ಇನ್ನೋವಾ ಕಾರಿನಲ್ಲಿ ಜಾಸ್ತಿ ಜನರಿದ್ದಿದ್ರಿಂದ ಚಾಲಕನ ನಿಯಂತ್ರಣ ತಪ್ಪಿದೆ ಅಂತಾ ಹೇಳಲಾಗ್ತಿದೆ. ಕುಲುವಿನಿಂದ 50 ಕಿಮೀ ದೂರದಲ್ಲಿರುವ ಪಾರ್ವತಿ ನದಿಯ ತಟದಲ್ಲಿ ಮಣಿಕರಣ್ ದೇವಾಲಯವಿದೆ. ಹೋಳಿ ಹಬ್ಬದ ಸಂದರ್ಭದಲ್ಲಿ ಇಲ್ಲಿಗೆ ಲಕ್ಷಾಂತರ ಭಕ್ತರು ಭೇಟಿ ನೀಡುತ್ತಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...