alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 8 ಮಂದಿ ಸಾವು

acc-ranchi

ರಾಂಚಿ: ಜಾರ್ಖಂಡ್ ನಲ್ಲಿ ಮದುವೆ ದಿಬ್ಬಣ ಕಾರ್ಯಕ್ಕೆ ಹೊರಟಿದ್ದ ಬಸ್ ಅಪಘಾತಕ್ಕೀಡಾಗಿ, 7 ಮಕ್ಕಳು ಹಾಗೂ ಓರ್ವ ಮಹಿಳೆ ಮೃತಪಟ್ಟು, 60 ಮಂದಿ ಗಾಯಗೊಂಡಿದ್ದಾರೆ.

ಜಾರ್ಖಂಡ್ ನ ಪಿಟೋರಿಯಾ –ಪ್ಯಾಟ್ರೂಟ್ ಹೆದ್ದಾರಿಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಈ ದುರ್ಘಟನೆ ಸಂಭವಿಸಿದೆ.

ಗಾಯಾಳುಗಳನ್ನು ರಾಂಚಿಯ ರಾಜೇಂದ್ರ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಸೇರಿಸಲಾಗಿದೆ. ಕಾಂಕೆ ಜಿಲ್ಲೆಯ ನಾಗ್ರಿಯ ನಿವಾಸಿಗಳು ಬಸ್ ನಲ್ಲಿ ಪಾಟ್ರುಟ್ ಗೆ ಮದುವೆಗೆ ತೆರಳುತ್ತಿದ್ದರು. ಚಾಲಕನ ನಿರ್ಲಕ್ಷ್ಯದಿಂದ ಅಪಘಾತವಾಗಿದೆ.

ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದು, ಮೃತರ ಕುಟುಂಬಕ್ಕೆ ಹಾಗೂ ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...