alex Certify
ಕನ್ನಡ ದುನಿಯಾ       Mobile App
       

Kannada Duniya

ದೇವಿಯ ದರ್ಶನಕ್ಕೆಂದು ಹೊರಟವರ ದಾರುಣ ಸಾವು

8 killed in Hoshiarpur, Punjab as brake-failed bus swerves into crowdವೇಗವಾಗಿ ಹೋಗುತ್ತಿದ್ದ ಬಸ್ಸಿನ ಬ್ರೇಕ್ ಫೇಲ್ ಆದ ಕಾರಣ ದಾರಿಹೋಕರ ಮೇಲೆ ನುಗ್ಗಿದ್ದು ಇದರಿಂದಾಗಿ 4 ಮಹಿಳೆಯರೂ ಸೇರಿದಂತೆ 8 ಮಂದಿ ಸಾವನ್ನಪ್ಪಿರುವ ಘಟನೆ ಪಂಜಾಬ್ ನ ಹೋಶಿಯಾರ್ ಪುರದ ಬಳಿಯ ಚೊಹಲ್-ಚಿಂತಪುರಿಯಲ್ಲಿ ನಡೆದಿದೆ. ಭಾನುವಾರ ಸಂಜೆ ನಡೆದ ಈ ಘಟನೆಯಲ್ಲಿ 15 ಮಂದಿ ಗಾಯಗೊಂಡಿದ್ದಾರೆ.

ಅಪಘಾತಕ್ಕೀಡಾದ ಬಸ್, ಪ್ರೀತಮ್ ಬಸ್ ಸರ್ವೀಸ್ ಎಂಬ ಖಾಸಗಿ ಕಂಪನಿಗೆ ಸೇರಿದ್ದಾಗಿದೆ. ಹಲವಾರು ಮಂದಿ ಭಕ್ತಾದಿಗಳು ಮಾತಾ ಚಿಂತಪುರ್ಣಿ ದೇವಸ್ಥಾನಕ್ಕೆ ಹೊರಟಿದ್ದು, ಮಾರ್ಗ ಮಧ್ಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರು ಎನ್ನಲಾಗಿದೆ. ಈ ವೇಳೆ ಬ್ರೇಕ್ ಫೇಲ್ ಆದ ಬಸ್ ಅವರುಗಳ ಮೇಲೆ ನುಗ್ಗಿದ್ದು, 8 ಮಂದಿ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಹೋಶಿಯಾರ್ ಪುರದ ಆಸ್ಪತ್ರೆಗೆ ಮತ್ತು ಗಂಭೀರವಾಗಿ ಗಾಯಗೊಂಡಿರುವವರನ್ನು ಚಂಡೀಗಢದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಮೃತರಾದವರಿಗೆ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಸಂತಾಪ ಸೂಚಿಸಿ, ಮೃತರ ಕುಟುಂಬಗಳಿಗೆ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...