alex Certify
ಕನ್ನಡ ದುನಿಯಾ       Mobile App
       

Kannada Duniya

ದೀಪಾವಳಿಯಂದೇ ಪಟಾಕಿ ದುರಂತ: 8 ಮಂದಿ ಸಾವು

ದೀಪಾವಳಿಯಂದೇ ಪಟಾಕಿ ಕಾರ್ಖಾನೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಒಡಿಶಾದ ಬಾಲಸೋರ್ ಜಿಲ್ಲೆಯ ಬಹಾಬಲ್ಪುರದ ಪಟಾಕಿ ಕಾರ್ಖಾನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಭಾರೀ ಸ್ಪೋಟ ಸಂಭವಿಸಿದೆ.

ಅವಘಡದಲ್ಲಿ ಕನಿಷ್ಠ 8 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಿಗ್ಗೆಯಷ್ಟೇ ರೂರ್ಕೇಲಾ ಮಾರ್ಕೇಟ್ ನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಪಟಾಕಿ ಸ್ಟಾಲ್ ಗಳಿಗೆ ಬೆಂಕಿ ತಗುಲಿ ಒಬ್ಬರು ಸಾವು ಕಂಡು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಟಾಲ್ ಗಳಲ್ಲಿದ್ದ ಪಟಾಕಿಗಳು ಸ್ಪೋಟಗೊಂಡು ಅಪಾರ ಹಾನಿ ಸಂಭವಿಸಿದೆ.

ಇದರ ಬೆನ್ನಲ್ಲೇ ಬಹಾಬಲ್ಪುರದ ಪಟಾಕಿ ಕಾರ್ಖಾನೆಯಲ್ಲಿ ತಗುಲಿದ ಬೆಂಕಿಯಿಂದ ಭಾರೀ ಹಾನಿ ಉಂಟಾಗಿದೆ. ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟದಿಂದ 8 ಮಂದಿ ಸಾವು ಕಂಡಿದ್ದಾರೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಹಲವರ ಸ್ಥಿತಿ ಚಿಂತಾಜನಕವಾಗಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...