alex Certify
ಕನ್ನಡ ದುನಿಯಾ       Mobile App
       

Kannada Duniya

ದೇಶಾದ್ಯಂತ ಬಾಕಿ ಇರುವ ಅತ್ಯಾಚಾರ ಪ್ರಕರಣಗಳ ಮಾಹಿತಿ ಕೇಳಿದ ಸುಪ್ರೀಂ

8 ತಿಂಗಳ ಮಗುವಿನ ಮೇಲೆ ನಡೆದ ಅತ್ಯಾಚಾರ ಪ್ರಕಣವನ್ನು ಸುಪ್ರೀಂ ಕೋರ್ಟ್ ಗಂಭೀರವಾಗಿ ಪರಿಗಣಿಸಿದೆ. ದೇಶದ ವಿವಿಧ ಕೋರ್ಟ್ ನಲ್ಲಿ ಬಾಕಿ ಇರುವ ಅತ್ಯಾಚಾರ ಪ್ರಕರಣದ ವರದಿಯನ್ನು ನೀಡುವಂತೆ ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ. 8 ತಿಂಗಳ ಮಗುವಿನ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಬೇಗ ಇತ್ಯರ್ಥಗೊಳಿಸಬೇಕೆಂದು ಅರ್ಜಿ ಸಲ್ಲಿಸಿದ್ದ ವಕೀಲ ಅಲೋಕ್ ಶ್ರೀವಾಸ್ತವ್ ಅವರಿಗೆ ವರದಿ ನೀಡುವಂತೆ ಕೋರ್ಟ್ ಹೇಳಿದೆ.

ಶೂನ್ಯದಿಂದ 10 ವರ್ಷದೊಳಗಿನ ಬಾಲಕಿಯರ ಮೇಲೆ ನಡೆದ ಅತ್ಯಾಚಾರ ಪ್ರಕಣದ ವಿಚಾರಣೆ ಅನೇಕ ಕೋರ್ಟ್ ಗಳಲ್ಲಿ ಬಾಕಿಯಿದೆ. ಎಲ್ಲ ಕೋರ್ಟ್ ಗಳಿಂದ ಅದ್ರ ವರದಿ ತರಿಸಿಕೊಂಡು ಸುಪ್ರೀಂ ಕೋರ್ಟ್ ಗೆ ನೀಡಬೇಕೆಂದು ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ.

ಬಾಲಕಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡ ಇಂದು ಕೋರ್ಟ್ ಮುಂದೆ ವರದಿ ಸಲ್ಲಿಸಲಿದೆ. ಭಾನುವಾರ ಘಟನೆ ನಡೆದಿತ್ತು. 28 ವರ್ಷದ ಸೋದರ ಸಂಬಂಧಿಯೇ ಮಗುವಿನ ಮೇಲೆ ಅತ್ಯಾಚಾರವೆಸಗಿದ್ದ. ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಮುಂದುವರೆದಿದೆ. ಮೂರು ಗಂಟೆಗಳ ಕಾಲ ಶಸ್ತ್ರಚಿಕಿತ್ಸೆ ನಡೆಸಿ ವೈದ್ಯರ ತಂಡ ಮಗುವಿಗೆ ಮರು ಜೀವ ನೀಡಿದೆ.

 

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...