alex Certify
ಕನ್ನಡ ದುನಿಯಾ       Mobile App
       

Kannada Duniya

RTI ಅಡಿ ಕಳೆದ ವರ್ಷ ಬಂದಿವೆ 9.76 ಲಕ್ಷ ಅರ್ಜಿಗಳು

rtiಮಾಹಿತಿ ಹಕ್ಕು ಕಾಯ್ದೆ ಜಾರಿಗೆ ಬಂದ ನಂತರ ಭ್ರಷ್ಟರ ಬಣ್ಣ ಬಯಲಾಗುತ್ತಿದೆ. ಇದರ ಮಧ್ಯೆ ಈ ಕಾಯ್ದೆಯ ದುರ್ಬಳಕೆ ಮಾಡಿಕೊಳ್ಳುತ್ತಿರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. 2015-16 ನೇ ಸಾಲಿನಲ್ಲಿ 9.76 ಲಕ್ಷ ಅರ್ಜಿಗಳು ಬಂದಿದ್ದು, ಅದರ ಹಿಂದಿನ ವರ್ಷಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ.20 ರಷ್ಟು ಹೆಚ್ಚಾಗಿದೆ.

ಮಾಹಿತಿ ಕೋರಿ ಬಂದ ಪ್ರತಿ 10 ಅರ್ಜಿಗಳ ಪೈಕಿ 4 ಕ್ಕೆ ಮಾಹಿತಿ ನಿರಾಕರಿಸಲ್ಪಟ್ಟಿದ್ದು, ಇವುಗಳಲ್ಲಿ ರಾಷ್ಟ್ರೀಯ ಹಿತಾಸಕ್ತಿಗೆ ಸಂಬಂಧಪಟ್ಟ, ವೈಯಕ್ತಿಕ ವಿವರ ಕೋರಿದ, ಕ್ಯಾಬಿನೆಟ್ ಸಭೆಯ ವಿವರ ಕೋರಿ ಸಲ್ಲಿಸಲ್ಪಟ್ಟ ಅರ್ಜಿಗಳು ಸೇರಿವೆ ಎನ್ನಲಾಗಿದೆ.

2014-15 ನೇ ಸಾಲಿನಲ್ಲಿ ಮಾಹಿತಿ ಹಕ್ಕು ಕಾಯ್ದೆಯಡಿ 7.55 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದವು. 2015-16 ನೇ ಸಾಲಿನಲ್ಲಿ ಅರ್ಜಿ ಸಲ್ಲಿಕೆ ಪ್ರಮಾಣ ಶೇ.20 ರಷ್ಟು ಹೆಚ್ಚಾಗಿದೆ. ಸಕಾಲಕ್ಕೆ ಮಾಹಿತಿ ನೀಡದ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 10.52 ಲಕ್ಷ ರೂಪಾಯಿ ದಂಡ ವಿಧಿಸಲಾಗಿದ್ದು, ಈ ಪೈಕಿ 9.41 ಲಕ್ಷ ರೂ. ಗಳನ್ನು ಮಾಹಿತಿ ಹಕ್ಕು ಕಾಯ್ದೆ ಅಧಿಕಾರಿಗಳು ಭರಿಸಿದ್ದಾರೆ. ಇನ್ನುಳಿದ ಪ್ರಕರಣಗಳಿಗೆ ನ್ಯಾಯಾಲಯದಿಂದ ತಡೆಯಾಜ್ಞೆ ನೀಡಲಾಗಿದೆ ಎಂದು ತಿಳಿದುಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...