alex Certify
ಕನ್ನಡ ದುನಿಯಾ       Mobile App
       

Kannada Duniya

ಪೈಶಾಚಿಕ ಕೃತ್ಯವೆಸಗಿದ ಕಾಮುಕ

ಗುಂಟೂರು: ಆಂಧ್ರಪ್ರದೇಶದ ಗುಂಟೂರಿನಲ್ಲಿ ಕಾಮುಕನೊಬ್ಬ ಪೈಶಾಚಿಕ ಕೃತ್ಯವೆಸಗಿದ್ದಾನೆ. ಈತನ ಕೃತ್ಯದಿಂದ ನಲುಗಿದ ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

9 ವರ್ಷದ ಬಾಲಕಿ ಮೇಲೆ ನೆರೆಮನೆಯ 50 ವರ್ಷದ ರಿಕ್ಷಾ ಚಾಲಕ ಲೈಂಗಿಕ ದೌರ್ಜನ್ಯ ಎಸಗಿದ್ದು, ಆತನನ್ನು ಬಂಧಿಸುವಂತೆ ಒತ್ತಾಯಿಸಿ ಸ್ಥಳೀಯರು ಹೆದ್ದಾರಿ ಬಂದ್ ಮಾಡಿ ರಸ್ತೆ ತಡೆ ನಡೆಸಿದ್ದಾರೆ.

ಬಾಲಕಿಯನ್ನು ಎಳೆದೊಯ್ದ ಕಾಮುಕ ಅತ್ಯಾಚಾರ ಎಸಗಿದ್ದಾನೆ. ಹೊಟ್ಟೆನೋವು ಮತ್ತು ರಕ್ತಸ್ರಾವದಿಂದ ಅಸ್ವಸ್ಥಳಾಗಿದ್ದ ಬಾಲಕಿಯನ್ನು ಪೋಷಕರು ಆಸ್ಪತ್ರೆಗೆ ಸೇರಿಸಿದ್ದಾರೆ. ಪರೀಕ್ಷೆ ನಡೆಸಿದ ವೈದ್ಯರು ಲೈಂಗಿಕ ದೌರ್ಜನ್ಯ ನಡೆದಿರುವುದನ್ನು ದೃಢಪಡಿಸಿದ್ದಾರೆ. ಬಾಲಕಿಗೆ ತೀವ್ರ ಗಾಯಗಳಾಗಿದ್ದು, ಶಸ್ತ್ರಚಿಕಿತ್ಸೆ ನಡೆಸಬೇಕಿದೆ ಎಂದು ವೈದ್ಯರು ಹೇಳಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತಲೆ ಮರೆಸಿಕೊಂಡಿರುವ ಆರೋಪಿ ಬಂಧನಕ್ಕೆ ಬಲೆ ಬೀಸಿದ್ದಾರೆ. ರಸ್ತೆ ತಡೆದ ಪ್ರತಿಭಟನಾನಿರತರ ಮನವೊಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...