alex Certify
ಕನ್ನಡ ದುನಿಯಾ       Mobile App
       

Kannada Duniya

ಒಂದೇ ಕುಟುಂಬದ 6 ಮಂದಿ ಆತ್ಮಹತ್ಯೆಗೆ ಶರಣು

ಜಾರ್ಖಂಡನ ಹಜಾರಿಬಾಗ್ ನಲ್ಲಿ ಒಂದು ಕುಟುಂಬದ ಆರು ಮಂದಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕುಟುಂಬದ ಐದು ಮಂದಿ ನೇಣಿಗೆ ಶರಣಾಗಿದ್ದಾರೆಂದು ಪೊಲೀಸರು ಹೇಳಿದ್ದಾರೆ. ಒಬ್ಬ ವ್ಯಕ್ತಿ ಮಹಡಿಯಿಂದ ಕೆಳಗೆ ಬಿದ್ದು ಪ್ರಾಣ ಬಿಟ್ಟಿದ್ದಾನೆ.

ಸದರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರಿಗೆ ಡೆತ್ ನೋಟ್ ಕೂಡ ಸಿಕ್ಕಿದೆ. ಮಾರ್ವಾಡಿ ಕುಟುಂಬ ಆತ್ಮಹತ್ಯೆ ಮಾಡಿಕೊಂಡಿದೆ. ಒಣ ಹಣ್ಣಿನ ವ್ಯಾಪಾರ ನಡೆಸುತ್ತಿದ್ದರಂತೆ. ವ್ಯಾಪಾರದಲ್ಲಿ ನಷ್ಟವಾಗಿದೆ. ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗ್ತಿದೆ.

ಆತ್ಮಹತ್ಯೆಯಾ ಅಥವಾ ಕೊಲೆಯಾ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ತನಿಖೆ ಮುಂದುವರೆಸಿದ್ದಾರೆ. 6 ವರ್ಷ ಹಾಗೂ 8 ವರ್ಷದ ಮಕ್ಕಳಿಂದ ಹಿಡಿದು 70 ವರ್ಷದ ವೃದ್ಧನವರೆಗೆ 6 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಆತ್ಮಹತ್ಯೆ ಬಗ್ಗೆ ವಿಚಾರಣೆ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...