alex Certify
ಕನ್ನಡ ದುನಿಯಾ       Mobile App
       

Kannada Duniya

ಪಕ್ಷದ ನಾಯಕನನ್ನು ಟೀಕಿಸಿದ ಶಾಸಕ ಸಸ್ಪೆಂಡ್

aap-amant

ನವದೆಹಲಿ: ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಆಮ್ ಆದ್ಮಿ ಪಾರ್ಟಿಯಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಪಕ್ಷದ ಶಾಸಕರೊಬ್ಬರನ್ನು ಅಮಾನತು ಮಾಡಲಾಗಿದೆ.

ಓಖ್ಲಾ ಶಾಸಕ ಅಮಾನತ್ ವುಲ್ಲಾ ಖಾನ್ ಅಮಾನತುಗೊಂಡವರು. ಆಪ್ ನಾಯಕ ಕುಮಾರ್ ವಿಶ್ವಾಸ್ ಬಿ.ಜೆ.ಪಿ. ಮತ್ತು ಆರ್.ಎಸ್.ಎಸ್. ಏಜೆಂಟ್ ಎಂದು ಖಾನ್ ಟೀಕಿಸಿದ್ದರು.

ಈ ಬೆಳವಣಿಗೆಗಳ ನಂತರ ಪಕ್ಷದಲ್ಲಿ ಬಿಕ್ಕಟ್ಟು ಸೃಷ್ಠಿಯಾಗಿ ಕುಮಾರ್ ವಿಶ್ವಾಸ್ ಪಕ್ಷ ತೊರೆಯುವ ನಿರ್ಧಾರ ಕೈಗೊಂಡಿದ್ದರು.

ಮುಖ್ಯಮಂತ್ರಿ ಕೇಜ್ರಿವಾಲ್ ಮತ್ತು ಪಕ್ಷದ ಮುಖಂಡರು ರಾತ್ರಿ ಸಭೆ ಸೇರಿ ಚರ್ಚೆ ನಡೆಸಿದ್ದು, ಅಮಾನತ್ ವುಲ್ಲಾ ಖಾನ್ ಅವರನ್ನು ಅಮಾನತು ಮಾಡಿದ್ದಾರೆ.

ರಾಜಸ್ತಾನದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಯ ಉಸ್ತುವಾರಿಯನ್ನು ಕುಮಾರ್ ವಿಶ್ವಾಸ್ ಅವರಿಗೆ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...