alex Certify
ಕನ್ನಡ ದುನಿಯಾ       Mobile App
       

Kannada Duniya

ಅರವಿಂದ ಕೇಜ್ರಿವಾಲ್ ರನ್ನು ಅವಮಾನಿಸಿದ ಅಧಿಕಾರಿಗಳು

ಲಾಭದಾಯಕ ಹುದ್ದೆ ಹೊಂದಿದ ಆರೋಪದ ಮೇಲೆ ಆಮ್ ಆದ್ಮಿ ಪಕ್ಷದ 20 ಮಂದಿ ಶಾಸಕರನ್ನು ಶಾಸಕತ್ವದಿಂದ ಅನರ್ಹಗೊಳಿಸಲಾಗಿದ್ದು, ಚುನಾವಣಾ ಆಯೋಗದ ಈ ಕ್ರಮದ ಬಗ್ಗೆ ನ್ಯಾಯಾಲಯದ ಮೆಟ್ಟಿಲೇರಿದ್ದರೂ ಯಾವುದೇ ಲಾಭವಾಗಿಲ್ಲ.

ಈ ಮಧ್ಯೆ ಗಣರಾಜ್ಯೋತ್ಸವ ಹಿನ್ನೆಲೆಯಲ್ಲಿ “ರಾಜ್ ನಿವಾಸ್” ದಲ್ಲಿ ಆಯೋಜಿಸಲಾಗಿದ್ದ ಸಮಾರಂಭಕ್ಕೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರನ್ನು ಲೆಪ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಆಹ್ವಾನಿಸಿದ್ದು, ಸಮಾರಂಭಕ್ಕೆ ತೆರಳಿದ್ದ ಅರವಿಂದ್ ಕೇಜ್ರಿವಾಲ್ ರಿಗೆ ಪೊಲೀಸ್ ಅಧಿಕಾರಿಗಳು ಶಾಕ್ ನೀಡಿದ್ದಾರೆ.

ಗೇಟ್ ನಲ್ಲಿಯೇ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ರ ಕಾರನ್ನು ತಡೆದು ಆಹ್ವಾನ ಪತ್ರಿಕೆಯನ್ನು ಪರಿಶೀಲಿಸಿದ್ದಾರೆ. ಅಷ್ಟೇ ಅಲ್ಲ ಕಾರನ್ನು ಇಲ್ಲಿಯೇ ಬಿಟ್ಟು ಕಾಲ್ನಡಿಗೆಯಲ್ಲಿ ಹೋಗುವಂತೆ ಸೂಚಿಸಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿರುವ ಆಮ್ ಆದ್ಮಿ ವಕ್ತಾರರು, ಬೇಕೆಂದೇ ಮುಖ್ಯಮಂತ್ರಿ ಕೇಜ್ರಿವಾಲ್ ರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...