alex Certify
ಕನ್ನಡ ದುನಿಯಾ       Mobile App
       

Kannada Duniya

ತಲ್ವಾರ್ ದಂಪತಿ ಮಾಡಿಲ್ಲ ಆರುಷಿ ಕೊಲೆ : ಹೈಕೋರ್ಟ್ ಮಹತ್ವದ ತೀರ್ಪು

ಆರುಷಿ ಹಾಗೂ ಹೇಮರಾಜ್ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆರುಷಿ ಪೋಷಕರಿಗೆ ನೆಮ್ಮದಿ ನೀಡಿದೆ. ತಂದೆ-ತಾಯಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದೆ. ಆರುಷಿಯನ್ನು ಪೋಷಕರು ಕೊಲೆ ಮಾಡಿಲ್ಲ ಎಂದು ಹೈಕೋರ್ಟ್ ಹೇಳಿದೆ. ರಾಜೇಶ್ ತಲ್ವಾರ್ ಹಾಗೂ ನೂಪುರ್ ತಲ್ವಾರ್ ವಿರುದ್ಧ ಸೂಕ್ತ ಸಾಕ್ಷ್ಯಾಧಾರದ ಕೊರತೆ ಹಿನ್ನೆಲೆಯಲ್ಲಿ ಅವರನ್ನು ಕೋರ್ಟ್ ಖುಲಾಸೆಗೊಳಿಸಿದೆ.

2013ರಲ್ಲಿ ಸಿಬಿಐ ಕೋರ್ಟ್ ಆರುಷಿ ಕೊಲೆ ಪ್ರಕರಣದಲ್ಲಿ ಪೋಷಕರನ್ನು ದೋಷಿಗಳೆಂದು ತೀರ್ಪು ನೀಡಿ ಪೋಷಕರಿಗೆ ಜೀವಾವಧಿ ಶಿಕ್ಷೆ ನೀಡಿತ್ತು. ಸಿಬಿಐ ಕೋರ್ಟ್ ತೀರ್ಪು ಪ್ರಶ್ನಿಸಿ ಆರುಷಿ ತಂದೆ-ತಾಯಿ ಅಲಹಾಬಾದ್ ಹೈಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಇದ್ರ ವಿಚಾರಣೆ ನಡೆಸಿದ ಕೋರ್ಟ್ ಸಿಬಿಐ ನೀಡಿದ್ದ ತೀರ್ಪನ್ನು ರದ್ದುಗೊಳಿಸಿದೆ. ಸಿಬಿಐ ತನಿಖೆ ಲೋಪದೋಷವನ್ನು ಕೋರ್ಟ್ ಉಲ್ಲೇಖಿಸಿದೆ.

ತಲ್ವಾರ್ ದಂಪತಿ, ಮಗಳು ಹಾಗೂ ಮನೆ ಕೆಲಸದವನನ್ನು ಹತ್ಯೆ ಮಾಡಿರುವ ಬಗ್ಗೆ ಪುರಾವೆಯಿಲ್ಲ ಎಂದು ಕೋರ್ಟ್ ಹೇಳಿದೆ. ಈ ಪ್ರಕರಣದಲ್ಲಿ ಅವರನ್ನು ನಿರ್ದೋಷಿಗಳೆಂದು ತೀರ್ಪು ನೀಡಿದ್ದು, ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ದಂಪತಿ ಈಗ ಜೈಲಿನಿಂದ ಹೊರಬರಲಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...