alex Certify
ಕನ್ನಡ ದುನಿಯಾ       Mobile App
       

Kannada Duniya

ಆರುಷಿ –ಹೇಮರಾಜ್ ಜೋಡಿ ಕೊಲೆ ಪ್ರಕರಣಕ್ಕೆ ಟ್ವಿಸ್ಟ್

ನವದೆಹಲಿ: ದೇಶಾದ್ಯಂತ ಸಂಚಲನ ಮೂಡಿಸಿದ್ದ ಆರುಷಿ –ಹೇಮರಾಜ್ ಜೋಡಿ ಕೊಲೆ ಪ್ರಕರಣ ಮತ್ತೊಂದು ತಿರುವು ಪಡೆದಿದೆ.

ಕಳೆದ ಅಕ್ಟೋಬರ್ 12 ರಂದು ತೀರ್ಪು ನೀಡಿದ್ದ ಅಲಹಾಬಾದ್ ಹೈಕೋರ್ಟ್, ಆರುಷಿ ಪೋಷಕರಾದ ಡಾ. ರಾಜೇಶ್ ತಲ್ವಾರ್, ಡಾ ನೂಪುರ್ ತಲ್ವಾರ್ ಅವರನ್ನು ಖುಲಾಸೆಗೊಳಿಸಿತ್ತು.

ಈ ತೀರ್ಪಿನ ವಿರುದ್ಧ ಹೇಮರಾಜ್ ಪತ್ನಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ. 2008 ರಲ್ಲಿ ನೋಯ್ಡಾದಲ್ಲಿ ಆರುಷಿ ತಲ್ವಾರ್ –ಹೇಮರಾಜ್ ಅವರ ಜೋಡಿ ಕೊಲೆಯಾಗಿತ್ತು.

ಈ ಪ್ರಕರಣದಲ್ಲಿ ಆರುಷಿ ತಂದೆ –ತಾಯಿಯನ್ನು ಸಿ.ಬಿ.ಐ. ಕೋರ್ಟ್ ತಪ್ಪಿತಸ್ಥರೆಂದು ಹೇಳಿತ್ತು. ಅಲಹಾಬಾದ್ ಹೈಕೋರ್ಟ್ ಸಾಕ್ಷ್ಯಾಧಾರಗಳ ಕಾರಣದಿಂದ ರಾಜೇಶ್ ತಲ್ವಾರ್ ದಂಪತಿಯನ್ನು ಖುಲಾಸೆಗೊಳಿಸಿತ್ತು.

ತಲ್ವಾರ್ ದಂಪತಿ ನಿರಪರಾಧಿಗಳು ಎಂದಾದರೆ, ಆರುಷಿ ಮತ್ತು ಹೇಮರಾಜ್ ಅವರನ್ನು ಕೊಂದವರು ಯಾರು ಎಂಬ ಪ್ರಶ್ನೆ ಎದುರಾಗಿತ್ತು. ಈಗ ಹೇಮರಾಜ್ ಪತ್ನಿ ಅಲಹಾಬಾದ್ ಹೈಕೋರ್ಟ್ ತೀರ್ಪಿನ ವಿರುದ್ಧ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...