alex Certify
ಕನ್ನಡ ದುನಿಯಾ       Mobile App
       

Kannada Duniya

ಇದೊಂದು ಐತಿಹಾಸಿಕ ತೀರ್ಪು: ಅಭಿಷೇಕ್ ಮನು ಸಿಂಘ್ವಿ

ಕರ್ನಾಟಕ ಸರ್ಕಾರ ರಚನೆ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪು ಹೊರಬಿದ್ದಿದೆ. ಸುಪ್ರೀಂ ವಿಚಾರಣೆ ನಂತ್ರ ಮಾತನಾಡಿದ ವಕೀಲ ಅಭಿಷೇಕ್ ಮನು ಸಿಂಘ್ವಿ, ಇದೊಂದು ಐತಿಹಾಸಿಕ ತೀರ್ಪು ಎಂದಿದ್ದಾರೆ. ಇದೊಂದು ಮಹತ್ವದ ಆದೇಶವೆಂದು ಸಿಂಘ್ವಿ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಆಡಳಿತಾತ್ಮಕ ನಿರ್ಧಾರ ತೆಗೆದುಕೊಳ್ಳಬಾರದು. ಹಾಗೆ ಹಂಗಾಮಿ ಸ್ಫೀಕರ್ ನೇಮಕ ಮಾಡಬೇಕೆಂದು ಸುಪ್ರೀಂ ಸೂಚನೆ ನೀಡಿದೆ. ಆಂಗ್ಲೋ ಇಂಡಿಯನ್ ಸದಸ್ಯನ ನೇಮಕಕ್ಕೆ ಸುಪ್ರೀಂ ತಡೆ ನೀಡಿದೆ ಎಂದು ಮನು ಸಿಂಘ್ವಿ ಮಾಧ್ಯಮಗಳಿಗೆ ಅಧಿಕೃತ ಮಾಹಿತಿ ನೀಡಿದ್ದಾರೆ.

ರಾಜ್ಯಪಾಲರ ನಿರ್ಣಯ ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ನಾಳೆಯೇ ವಿಶ್ವಾಸಮತ ಯಾಚನೆಗೆ ಸೂಚನೆ ನೀಡಿದೆ. ಹಾಗೆ ರಾಜ್ಯಪಾಲರ ಬಗ್ಗೆ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು 10 ವಾರಗಳ ನಂತ್ರ ಮುಂದುವರೆಸಲಿದೆ ಎಂದಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಅತಂತ್ರ ವಿಧಾನಸಭೆ ಸೃಷ್ಟಿಯಾದ ಬಳಿಕ ರಾಜ್ಯದಲ್ಲಿ ಆರಂಭವಾಗಿದೆಯಾ ಶಾಸಕರ ಕುದುರೆ ವ್ಯಾಪಾರ?

    View Results

    Loading ... Loading ...