alex Certify
ಕನ್ನಡ ದುನಿಯಾ       Mobile App
       

Kannada Duniya

ಅಧಿಕಾರದ ಮದವೇರಿದವನು ಮಾಡಿದ್ದೇನು ಗೊತ್ತಾ..?

bjp-mla 6790ಜನ ಸೇವೆ ಮಾಡುವುದಾಗಿ ಹೇಳಿ ಚುನಾಯಿತನಾದ ಶಾಸಕನೊಬ್ಬ ಅಧಿಕಾರದ ಮದದಲ್ಲಿ ಮಾಡಬಾರದ ಕಾರ್ಯ ಮಾಡಿದ್ದಾನೆ. ಈತನ ಈ ಕೃತ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಶಾಸಕನ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.

ಛತ್ತೀಸ್ ಘಡದ ದಾಂಟೇವಾಡಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಬಿಜೆಪಿ ಶಾಸಕ ಅಭಿಲಾಶ್ ತಿವಾರಿ ನಗರ ಪ್ರದಕ್ಷಿಣೆ ಹೊರಟಿದ್ದಾನೆ. ಈ ವೇಳೆ ರಸ್ತೆ ಬದಿಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದವರನ್ನು ಕಂಡು ಕೆಂಡಾಮಂಡಲಗೊಂಡ ಈತ, ತರಕಾರಿಯನ್ನು ಕಾಲಿನಿಂದ ಒದ್ದಿದ್ದಲ್ಲದೇ ಅವರುಗಳಿಗೆ ಬಾಯಿಗೆ ಬಂದಂತೆ ಬೈದಿದ್ದಾನೆ. ಅಷ್ಟೇ ಅಲ್ಲ ಇನ್ನು ಮುಂದೆ ರಸ್ತೆ ಬದಿ ವ್ಯಾಪಾರ ಮಾಡದಂತೆ ತಾಕೀತು ಮಾಡಿದ್ದಾನೆ.

ಈ ಎಲ್ಲ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆ ಹಿಡಿದವರೊಬ್ಬರು ಸಾಮಾಜಿಕ ಜಾಲತಾಣದಲ್ಲಿ ಅಪ್ ಲೋಡ್ ಮಾಡಿದ್ದು, ಶಾಸಕನ ಅನಾಗರೀಕ ವರ್ತನೆಗೆ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಇದರಿಂದ ಎಚ್ಚೆತ್ತುಕೊಂಡ ಶಾಸಕ ಅಭಿಲಾಶ್ ತಿವಾರಿ ಈಗ ಕ್ಷಮಾಪಣೆ ಕೇಳಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...