alex Certify
ಕನ್ನಡ ದುನಿಯಾ       Mobile App
       

Kannada Duniya

ತಿರುಪತಿ ತಿಮ್ಮಪ್ಪನ ದರ್ಶನ ಮುಗಿಸಿ ಬರುವಾಗಲೇ ದುರಂತ

ಚಿತ್ತೂರು: ಖಾಸಗಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ, ಮಹಿಳೆ ಸೇರಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಂಗಾರುಪಾಳ್ಯಂನಲ್ಲಿ ನಡೆದಿದೆ.

ಕರ್ನಾಟಕದ ಕೋಲಾರ ಜಿಲ್ಲೆಯ ಗಡಿಭಾಗದ ಹೆದ್ದಾರಿಯಲ್ಲಿ ಸಾಗುತ್ತಿದ್ದ ಕಾರಿಗೆ ಬಸ್ ಡಿಕ್ಕಿ ಹೊಡೆದಿದ್ದು, ತಿರುಪತಿಯಿಂದ ಕೇರಳದ ಕಾಸರಗೋಡಿಗೆ ತೆರಳುತ್ತಿದ್ದ ಭಕ್ತರು ಸಾವನ್ನಪ್ಪಿದ್ದಾರೆ. ಮೃತರು ಕೇರಳ ಮೂಲದವರಾಗಿದ್ದಾರೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಟ್ಯಾಂಕರ್ ಓವರ್ ಟೇಕ್ ಮಾಡಲು ಹೋಗಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಖಾಸಗಿ ಬಸ್ ಚಾಲಕ ಅತಿವೇಗವಾಗಿ ಬಸ್ ಚಾಲನೆ ಮಾಡಿಕೊಂಡು ಬಂದಿದ್ದು, ನಿಯಂತ್ರಣ ತಪ್ಪಿದ ಬಸ್ ಕಾರಿಗೆ ಡಿಕ್ಕಿ ಹೊಡೆದಿದೆ. ಘಟನೆಯ ಬಳಿಕ ಬಸ್ ಚಾಲಕ ಪರಾರಿಯಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...