alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆ ಬದಿ ನಿಂತವರ ಮೇಲೆ ಹರಿದ ಕಾರು, ಮೂವರ ಸಾವು

ವಿಜಯಪುರ: ಮಹಾರಾಷ್ಟ್ರದ ಸೊಲ್ಲಾಪುರ ಸಮೀಪದ ತುಳಜಾಪುರದಲ್ಲಿ ನಡೆದ ಭೀಕರ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಕಾನ್ನಾಳ ಗ್ರಾಮದ ಟಿಪ್ಪು ಉಮರ್ ಸಾಬ್ ಚಪ್ಪರ್ ಬಂದ್(23), ಅಬ್ದುಲ್ ಸಾಬ್ ಚಪ್ಪರ್ ಬಂದ್(40) ಮೃತಪಟ್ಟವರೆಂದು ಗುರುತಿಸಲಾಗಿದೆ. ಕಾರು ಚಾಲಕ ಕೂಡ ಸಾವನ್ನಪ್ಪಿದ್ದಾನೆ.

ಇವರು ರಸ್ತೆ ಬದಿ ನಿಂತಿದ್ದ ಸಂದರ್ಭದಲ್ಲಿ ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಕಾರಿನ ಟೈಯರ್ ಸ್ಪೋಟಗೊಂಡು ಚಾಲಕನ ನಿಯಂತ್ರಣ ತಪ್ಪಿದ್ದು, ರಸ್ತೆ ಬದಿ ನಿಂತಿದ್ದವರಿಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಅಪಘಾತದಲ್ಲಿ ಕಾರಿನ ಚಾಲಕ ಹಾಗೂ ರಸ್ತೆ ಬದಿ ನಿಂತಿದ್ದ ಇಬ್ಬರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸೊಲ್ಲಾಪುರ ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...