alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 6 ಮಂದಿ ದುರ್ಮರಣ

acc dehli

ನವದೆಹಲಿ: ಟ್ರಕ್ ಹಾಗೂ ಕಾರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ, ಸ್ಥಳದಲ್ಲೇ 6 ಮಂದಿ ಸಾವಿಗೀಡಾದ ಘಟನೆ ನವದೆಹಲಿ ಹೊರವಲಯದಲ್ಲಿ ನಡೆದಿದೆ. ಆಲಿಪುರದಲ್ಲಿ ಈ ಘಟನೆ ನಡೆದಿದೆ.

ಆಲಿಪುರದ ಜಿ.ಟಿ. ಕರ್ನಲ್ ರಸ್ತೆಯಲ್ಲಿ ಅತಿ ವೇಗವಾಗಿ ಬಂದ ಕಾರ್ ಹಾಗೂ ಟ್ರಕ್ ಗಳು ಚಾಲಕರ ನಿಯಂತ್ರಣಕ್ಕೆ ಸಿಗದೇ ಮುಖಾಮುಖಿಯಾಗಿವೆ. ಡಿಕ್ಕಿಯ ರಭಸಕ್ಕೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಭೀಕರ ದುರಂತದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಆಲಿಪುರ ಠಾಣೆ ಪೊಲೀಸರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಘಟನೆಯಿಂದಾಗಿ ಜಿ.ಟಿ.ಕರ್ನಲ್ ರಸ್ತೆಯಲ್ಲಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿತ್ತು. ಪೊಲೀಸರು, ಅಪಘಾತವಾಗಿದ್ದ ಕಾರ್, ಟ್ರಕ್ ಗಳನ್ನು ತೆರವುಗೊಳಿಸಿದ ನಂತರ, ಸಂಚಾರ ವ್ಯವಸ್ಥೆ ಸರಿಯಾಯಿತು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...