alex Certify
ಕನ್ನಡ ದುನಿಯಾ       Mobile App
       

Kannada Duniya

ನಿಂತಿದ್ದ ಕಾರಿಗೆ ಲಾರಿ ಡಿಕ್ಕಿ: ಆರು ಮಂದಿ ದುರ್ಮರಣ

acc j 24ನಿಂತಿದ್ದ ಕಾರಿಗೆ ವೇಗವಾಗಿ ಬಂದ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಮಕ್ಕಳೂ ಸೇರಿದಂತೆ ಒಂದೇ ಕುಟುಂಬದ ಆರು ಮಂದಿ ಸಾವನ್ನಪ್ಪಿರುವ ದಾರುಣ ಘಟನೆ ಆಂಧ್ರ ಪ್ರದೇಶದ ಪ್ರಕಾಶಂ ಜಿಲ್ಲೆಯ ಮೇದರಮೆಟ್ಲದಲ್ಲಿ ನಡೆದಿದೆ.

ತಿರುಮಲಕ್ಕೆ ಹೋಗಿದ್ದ ಕುಟುಂಬವೊಂದು ವಾಪಾಸ್ ಗುಂಟೂರಿಗೆ ತೆರುತ್ತಿದ್ದ ವೇಳೆ ಮೇದರಮೆಟ್ಲದಲ್ಲಿ ಕಾರು ನಿಲ್ಲಿಸಿಕೊಂಡಿದ್ದು, ಈ ಸಂದರ್ಭದಲ್ಲಿ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದಾಗಿ ಸ್ಥಳದಲ್ಲೇ ಆರು ಮಂದಿ ಸಾವು ಕಂಡಿದ್ದು, ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ಅಪಘಾತ ಸಂಭವಿಸುತ್ತಿದ್ದಂತೆಯೇ ಲಾರಿ ಚಾಲಕ ಸ್ಥಳದಲ್ಲೇ ಲಾರಿ ಬಿಟ್ಟು ಪರಾರಿಯಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿರುವ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...