alex Certify
ಕನ್ನಡ ದುನಿಯಾ       Mobile App
       

Kannada Duniya

ಆಟೋ ಗೆ ಬಸ್ ಡಿಕ್ಕಿ: ಏಳು ಮಂದಿ ದುರ್ಮರಣ

ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಸೋಮಯಾಜಲಪಲ್ಲಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ಸಾವನ್ನಪ್ಪಿ, ಐವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಆಟೋದಲ್ಲಿ ಮಹಾನಂದಿ ಗ್ರಾಮಕ್ಕೆ ತೆರಳುವಾಗ ಆಂಧ್ರ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದ್ದು, ಮೃತರು ಕರ್ನೂಲ್ ಜಿಲ್ಲೆಯ ಕಲ್ಲವಾಡ ಗ್ರಾಮದವರೆಂದು ತಿಳಿದುಬಂದಿದೆ.

ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...