alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ವಾಮಿ ಅಗ್ನಿವೇಶ್ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರಿಂದ ಹಲ್ಲೆ

ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಅವರ ಮೇಲೆ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ನಡೆದಿದೆ.

ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಸ್ವಾಮಿ ಅಗ್ನಿವೇಶ್, ಇಂದು ಜಾರ್ಖಂಡ್ ನ ಪಾಕುರ್ ಜಿಲ್ಲೆಗೆ ಆಗಮಿಸಿದ್ದ ವೇಳೆ, ಅವರ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಿದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಬಳಿಕ ಹಲ್ಲೆ ನಡೆಸಿದ್ದಾರೆ.

ತಮ್ಮ ಮೇಲೆ ನಡೆದ ಹಲ್ಲೆ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ 80 ವರ್ಷ ವಯಸ್ಸಿನ ಸ್ವಾಮಿ ಅಗ್ನಿವೇಶ್, ಬಿಜೆಪಿ ಕಾರ್ಯಕರ್ತರು ಯಾಕಾಗಿ ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬುದು ತಿಳಿದುಬಂದಿಲ್ಲ. ತಾವು ಹೋಟೆಲ್ ನಿಂದ ಹೊರ ಬರುತ್ತಿದ್ದಂತೆಯೇ ನನ್ನ ಮೇಲೆ ಮುಗಿಬೀಳಲಾಯಿತು ಎಂದು ಹೇಳಿದ್ದಾರೆ.

ಗಾಯಗೊಂಡಿರುವ ಸ್ವಾಮಿ ಅಗ್ನಿವೇಶ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹಲ್ಲೆಗೆ ಸಂಬಂಧಿಸಿದಂತೆ 20 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...