alex Certify
ಕನ್ನಡ ದುನಿಯಾ       Mobile App
       

Kannada Duniya

ಲೋಕಸಭಾ ಚುನಾವಣೆಯ ಗೆಲುವಿಗಾಗಿ ಹೇಗಿದೆ ಗೊತ್ತಾ ಬಿಜೆಪಿ ತಯಾರಿ?

2019 ರಲ್ಲಿ ನಡೆಯುವ ಲೋಕಸಭಾ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ ಈಗಿನಿಂದಲೇ ಭರ್ಜರಿ ತಯಾರಿ ನಡೆಸಿದ್ದು, 2014 ರಲ್ಲಿ ಗಳಿಸಿದ್ದಕ್ಕಿಂತ ಅಧಿಕ ಸ್ಥಾನಗಳನ್ನು ಪಡೆಯಲು ಕಾರ್ಯತಂತ್ರ ರೂಪಿಸುತ್ತಿದೆ.

ಇದರ ಭಾಗವಾಗಿ ಲೋಕಸಭಾ ಚುನಾವಣೆಯಲ್ಲಿ ಖ್ಯಾತ ನಟರು ಕ್ರೀಡಾಪಟುಗಳು ಹಾಗೂ ಗಣ್ಯ ವ್ಯಕ್ತಿಗಳನ್ನು ಬಿಜೆಪಿಯಿಂದ ಕಣಕ್ಕಿಳಿಸಲು ನಿರ್ಧರಿಸಲಾಗಿದೆ ಎನ್ನಲಾಗಿದ್ದು, ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಅನುಪಮ್ ಖೇರ್, ನಾನಾ ಪಾಟೇಕರ್ ಸೇರಿದಂತೆ ಹಲವರ ಮನವೊಲಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಪಕ್ಷ ಯಾವ ಕ್ಷೇತ್ರದಲ್ಲಿ ದುರ್ಬಲವಾಗಿದೆಯೋ ಅಂತಹ ಕ್ಷೇತ್ರಗಳಲ್ಲಿ ಇವರುಗಳನ್ನು ಕಣಕ್ಕಿಳಿಸಿದರೆ ಗೆಲುವು ಸಾಧಿಸುವುದು ಸುಲಭ ಎಂಬ ಲೆಕ್ಕಾಚಾರ ಈ ಕಾರ್ಯತಂತ್ರದ ಹಿಂದಿದೆ ಎನ್ನಲಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಇದೇ ತಂತ್ರ ಅನುಸರಿಸಿದ್ದ ಬಿಜೆಪಿ ನಾಯಕರು ಅದರಲ್ಲಿ ಯಶಸ್ಸು ಸಾಧಿಸಿದ್ದರು. 2014 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಕಣಕ್ಕಿಳಿದಿದ್ದ ಗಾಯಕರುಗಳಾದ ಮನೋಜ್ ತಿವಾರಿ ಮತ್ತು ಬಬೂಲ್ ಸುಪ್ರಿಯೋ, ಬಾಲಿವುಡ್ ತಾರೆಯರಾದ ಪರೇಶ್ ರಾವಲ್ ಮತ್ತು ಕಿರಣ್ ಖೇರ್, ಒಲಂಪಿಕ್ ಪದಕ ವಿಜೇತ ರಾಜ್ಯವರ್ಧನ್ ಸಿಂಗ್ ರಾಥೋಡ್, ಅಂಕಣಕಾರ ಪ್ರತಾಪ್ ಸಿಂಹ, ಮಾಜಿ ಸೇನಾ ಮುಖ್ಯಸ್ಥ ವಿ.ಕೆ. ಸಿಂಗ್ ಮೊದಲಾದವರನ್ನು ಕಣಕ್ಕಿಳಿಸಿ ಯಶಸ್ಸು ಸಾಧಿಸಿದ್ದ ಬಿಜೆಪಿ ಮುಂಬರುವ ಲೋಕಸಭಾ ಚುನಾವಣೆಯಲ್ಲೂ ಇದನ್ನು ಮುಂದುವರೆಸಲಿದೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...