alex Certify
ಕನ್ನಡ ದುನಿಯಾ       Mobile App
       

Kannada Duniya

ಕಚೇರಿಯಲ್ಲೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಪೊಲೀಸ್ ಅಧಿಕಾರಿ

ಉತ್ತರಪ್ರದೇಶದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ತಮ್ಮ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಭಯೋತ್ಪಾದನೆ ನಿಗ್ರಹ ದಳದಲ್ಲಿ ಸಹಾಯಕ ರಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ರಾಜೇಶ್ ಸಾಹ್ನಿ ಆತ್ಮಹತ್ಯೆಗೆ ಶರಣಾದ ಅಧಿಕಾರಿಯಾಗಿದ್ದು, 12.30 ರ ಸುಮಾರಿಗೆ ಲಕ್ನೋದ ಗೋಮತಿ ನಗರದಲ್ಲಿರುವ ತಮ್ಮ ಕಚೇರಿಯಲ್ಲಿಯೇ ರಾಜೇಶ್ ಸಾವನ್ನಪ್ಪಿದ್ದಾರೆ.

ರಾಜೇಶ್ ರಜೆ ಮೇಲಿದ್ದರು ಎಂದು ಹೇಳಲಾಗಿದ್ದು, ಇಂದು ಬೆಳಗ್ಗೆ ಕಚೇರಿಗೆ ಆಗಮಿಸಿದ ಅವರು ತಮ್ಮ ಚಾಲಕ ಮನೋಜ್ ಬಳಿ ಕಾರಿನಲ್ಲಿದ್ದ ಸರ್ವಿಸ್ ರಿವಾಲ್ವರ್ ತೆಗೆದುಕೊಂಡು ಬರುವಂತೆ ಹೇಳಿದ್ದಾರೆ. ಬಳಿಕ ಕೊಠಡಿಯ ಬಾಗಿಲು ಹಾಕಿಕೊಂಡು ಗುಂಡು ಹಾರಿಸಿಕೊಂಡಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ಯಾವ ಕಾರಣಕ್ಕೆ ರಾಜೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬುದರ ಕುರಿತು ತನಿಖೆಗೆ ಮುಂದಾಗಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...