alex Certify
ಕನ್ನಡ ದುನಿಯಾ       Mobile App
       

Kannada Duniya

40 ವರ್ಷಗಳ ಬಳಿಕ ಕಾಂಗ್ರೆಸ್ ಸಖ್ಯ ತೊರೆದ ಹಿರಿಯ ನಾಯಕ

ಕಳೆದ 40 ವರ್ಷಗಳಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿದ್ದ ಮೇಘಾಲಯದ ಮಾಜಿ ಮುಖ್ಯಮಂತ್ರಿ ಡಿ.ಡಿ. ಲಪಾಂಗ್ ಈಗ ಪಕ್ಷ ತೊರೆದಿದ್ದಾರೆ.

ಈ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಪತ್ರ ಬರೆದಿರುವ 85 ವರ್ಷದ ಲಪಾಂಗ್, ಹಿರಿಯರನ್ನು ಈಗ ಪಕ್ಷದಲ್ಲಿ ಕಡೆಗಣಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

1972 ರಿಂದಲೂ ಶಾಸಕರಾಗಿ ಆಯ್ಕೆಯಾಗುತ್ತಾ ಬಂದಿದ್ದ ಲಪಾಂಗ್, 1993 ರಲ್ಲಿ ಒಮ್ಮೆ ಮಾತ್ರ ಪರಾಭವಗೊಂಡಿದ್ದರು. ಮೇಘಾಲಯ ಕಾಂಗ್ರೆಸ್ ಮುಖ್ಯಸ್ಥರಾಗಿದ್ದ ಅವರನ್ನು ಕಳೆದ ವರ್ಷವಷ್ಟೇ ಬದಲಾಯಿಸಲಾಗಿತ್ತು. ಇದೀಗ ಪಕ್ಷ ತೊರೆದಿರುವ ಲಪಾಂಗ್ ಸಾರ್ವಜನಿಕ ಸೇವೆಯಲ್ಲಿ ಮುಂದುವರಿಯುವುದಾಗಿ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...