alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಾರ್ಥನೆ ಬಳಿಕ ಪ್ರದರ್ಶನವಾಯ್ತು ಪಾಕ್ ಬಾವುಟ

isis-jamu

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಶುಕ್ರವಾರದ ಪ್ರಾರ್ಥನೆ ಬಳಿಕ ಶ್ರೀನಗರದಲ್ಲಿ ಕಲ್ಲು ತೂರಾಟ ನಡೆಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಪಾಕಿಸ್ತಾನದ ಕಿಡಿಗೇಡಿ ಕೃತ್ಯಗಳನ್ನು ಸಹಿಸುವುದಿಲ್ಲ. ಪ್ರತ್ಯೇಕತಾವಾದಿಗಳು ಅವರನ್ನು ಬೆಂಬಲಿಸುವುದಿಲ್ಲ. ಪಾಕ್ ಧ್ವಜ ಹಾರಾಟಕ್ಕೆ ಅವಕಾಶ ನೀಡುವುದಿಲ್ಲ ಎಂದು ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹೇಳಿಕೆ ನೀಡಿದ ಬಳಿಕ ಶ್ರೀನಗರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ.

ಶುಕ್ರವಾರದ ಪ್ರಾರ್ಥನೆ ನಂತರ ಗುಂಪುಗೂಡಿದ ಯುವಕರು, ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿಕೊಂಡು ಕಲ್ಲು, ಚಪ್ಪಲಿ ತೂರಿದ್ದಾರೆ. ಮಾತ್ರವಲ್ಲ, ಐಸಿಸ್, ಪಾಕಿಸ್ತಾನ ಬಾವುಟಗಳನ್ನು ಪ್ರದರ್ಶಿಸಿದ್ದಾರೆ. ಘಟನೆಯ ಬಳಿಕ ಪೊಲೀಸರು ಮತ್ತು ಸೈನಿಕರು ಯುವಕರನ್ನು ಚದುರಿಸಲು ಹರಸಾಹಸ ನಡೆಸಿದ್ದಾರೆ. ಉದ್ವಿಗ್ನ ಸ್ಥಿತಿ ಮುಂದುವರೆದಿದೆ ಎಂದು ತಿಳಿದು ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...