alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಲೇಜ್ ಗಳಲ್ಲಿ ಬ್ಯಾನ್ ಆಯ್ತು ಜೀನ್ಸ್, ಟೀ ಶರ್ಟ್

up-jes-colej

ಲಖ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅಧಿಕಾರ ವಹಿಸಿಕೊಳ್ಳುತ್ತಲೇ, ಸರ್ಕಾರಿ ಕಚೇರಿಗಳಲ್ಲಿ ಗುಟ್ಕಾ, ಸಿಗರೇಟ್, ಪಾನ್ ಮಸಾಲ ಸೇವನೆ ಮಾಡದಂತೆ ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ.

ಇದರ ಮುಂದಿನ ಭಾಗವಾಗಿ ರಾಜ್ಯದ ಕಾಲೇಜ್ ಗಳಲ್ಲಿ ಡ್ರೆಸ್ ಕೋಡ್ ಜಾರಿಗೆ ಮುಂದಾಗಿದ್ದಾರೆ. ಕಾಲೇಜ್ ಗಳಲ್ಲಿ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಜೀನ್ಸ್, ಟೀ ಶರ್ಟ್ ಧರಿಸುವುದರ ಮೇಲೆ ನಿರ್ಬಂಧ ಹೇರಲಾಗಿದೆ.

ಉತ್ತರ ಪ್ರದೇಶದಲ್ಲಿ ಉನ್ನತ ಶಿಕ್ಷಣದ 158 ಸರ್ಕಾರಿ, 331 ಅನುದಾನಿತ ಕಾಲೇಜ್ ಗಳಿದ್ದು, ಇವುಗಳನ್ನು ಒಳಗೊಂಡಂತೆ ರಾಜ್ಯದ ಕಾಲೇಜ್ ಗಳಲ್ಲಿ ಟೀ ಶರ್ಟ್, ಜೀನ್ಸ್ ನಿಷೇಧಿಸುವಂತೆ ಉನ್ನತ ಶಿಕ್ಷಣ ಇಲಾಖೆಗೆ ಆದಿತ್ಯನಾಥ್ ಸೂಚಿಸಿದ್ದಾರೆ.

ಈಗಾಗಲೇ ಕೆಲವು ಕಾಲೇಜ್ ಗಳಲ್ಲಿ ಜೀನ್ಸ್, ಟೀ ಶರ್ಟ್ ಧರಿಸುವುದನ್ನು ನಿಷೇಧಿಸಲಾಗಿದೆ. ಉನ್ನತ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿ ಊರ್ಮಿಳಾ ಸಿಂಗ್ ಅವರಿಗೆ ಈ ಕುರಿತು ಕ್ರಮ ಕೈಗೊಳ್ಳಲು ಸೂಚನೆ ನೀಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...