alex Certify
ಕನ್ನಡ ದುನಿಯಾ       Mobile App
       

Kannada Duniya

‘ಚುನಾವಣಾ ಆಯೋಗ ಹಲ್ಲು ಇಲ್ಲದ ಹುಲಿ’

ಹೈದರಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡದಿರುವ ಚುನಾವಣಾ ಆಯೋಗದ ಕ್ರಮದ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ.

ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಆಯೋಗದ ಕ್ರಮವನ್ನು ಟೀಕಿಸಿದ್ದು, ಬಿ.ಜೆ.ಪಿ. ಒತ್ತಡ ಹಾಕಿದ್ದರಿಂದ ಚುನಾವಣೆ ಘೋಷಣೆ ವಿಳಂಬ ಮಾಡಲಾಗಿದೆ ಎಂದು ಆರೋಪಿಸಿವೆ.

ಬಿ.ಜೆ.ಪಿ. ಸಂಸದ ವರುಣ್ ಗಾಂಧಿ ಕೂಡ ಚುನಾವಣಾ ಆಯೋಗವನ್ನು ಹಲ್ಲು ಇಲ್ಲದ ಹುಲಿ ಎಂದು ಟೀಕಿಸಿದ್ದಾರೆ. ಚುನಾವಣೆಯಲ್ಲಿ ಮಾಡಿದ ಖರ್ಚು ವೆಚ್ಚ ಕೊಡದ ರಾಜಕೀಯ ಪಕ್ಷಗಳ ವಿರುದ್ಧ, ಪ್ರಮುಖ ಅಭ್ಯರ್ಥಿಗಳ ವಿರುದ್ಧ ಆಯೋಗ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.

ಹೈದರಾಬಾದ್ ನಲ್ಸರ್ ವಿ.ವಿ.ಯಲ್ಲಿ ಭಾರತದಲ್ಲಿ ರಾಜಕೀಯ ಸುಧಾರಣೆಗಳ ವಿಚಾರವಾಗಿ ಮಾತನಾಡುತ್ತಿದ್ದ ಅವರು, ವಿಳಂಬವಾಗಿ ಮಾಹಿತಿ ನೀಡಿದ, ಸರಿಯಾಗಿ ಮಾಹಿತಿ ನೀಡದ ಪಕ್ಷಗಳ ವಿರುದ್ಧ ಆಯೋಗ ಕ್ರಮ ಕೈಗೊಂಡಿಲ್ಲ ಎಂದು ಹೇಳಿದ್ದಾರೆ.

ಪ್ರಸ್ತುತ ಬಡ, ಮಧ್ಯಮ ವರ್ಗದವರು ಚುನಾವಣೆಗೆ ಸ್ಪರ್ಧಿಸಲು ಸಾಧ್ಯವೇ ಇಲ್ಲದಂತಹ ಸ್ಥಿತಿ ಉಂಟಾಗಿದೆ. ಶ್ರೀಮಂತ ಅಭ್ಯರ್ಥಿಗಳು ನಿಗದಿಪಡಿಸಿದ್ದಕ್ಕಿಂತ ಹೆಚ್ಚು ಹಣವನ್ನು ಖರ್ಚು ಮಾಡುತ್ತಾರೆ. ಅಂತಹವರ ಮಾಹಿತಿಯನ್ನು ಆಯೋಗ ಬಹಿರಂಗಪಡಿಸಿ ಕ್ರಮ ಕೈಗೊಂಡಿಲ್ಲ ಎಂದು ಟೀಕಿಸಿದ್ದಾರೆ.

ಸಾಮಾನ್ಯರಿಗೆ ಮಾತ್ರ ನೂರೆಂಟು ನಿಯಮಗಳು ಅನ್ವಯವಾಗುತ್ತವೆ. ಕೆಲವು ಪ್ರಕರಣ ಹೊರತುಪಡಿಸಿ, ಬಲಾಢ್ಯರಿಗೆ ನಿಯಮ ಅನ್ವಯಿಸಲ್ಲ. ರಾಜಕೀಯ ಪಕ್ಷಗಳು, ಅಭ್ಯರ್ಥಿಗಳು ಪಾರದರ್ಶಕತೆ ಕಾಯ್ದುಕೊಳ್ಳಬೇಕಿದೆ. ಬದಲಾವಣೆಗೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...