alex Certify
ಕನ್ನಡ ದುನಿಯಾ       Mobile App
       

Kannada Duniya

ಥಾಣೆಯ ಭಿವಂಡಿಯಲ್ಲಿ ಅಗ್ನಿ ಆಕಸ್ಮಿಕ

bhiwandi-fireಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ಪಟ್ಟಣದಲ್ಲಿ ಗಾರ್ಮೆಂಟ್ ಫ್ಯಾಕ್ಟರಿಯೊಂದರಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಕಟ್ಟಡದಲ್ಲಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ.

ಇಂದು ಬೆಳಿಗ್ಗೆ 7-30 ರ ಸುಮಾರಿಗೆ ನಾಲ್ಕಂತಸ್ತಿನ ಕಟ್ಟಡದ ನೆಲ ಮಾಳಿಗೆಯ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಟ್ಟಡದಲ್ಲಿದ್ದವರು ಹೊರ ಬರಲಾಗದೆ ಮೇಲ್ಮಡಿಗೆ ಹೋಗಿ ರಕ್ಷಣೆಗೆ ಮೊರೆಯಿಟ್ಟಿದ್ದಾರೆ.

ಸುದ್ದಿ ತಿಳಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವುದರ ಜೊತೆಗೆ ಕಟ್ಟಡದ ಮೇಲಿರುವವರನ್ನು ಸುರಕ್ಷಿತವಾಗಿ ಕೆಳಗಿಳಿಸುತ್ತಿದ್ದಾರೆ. ಈಗಾಗಲೇ 20 ಮಂದಿಯನ್ನು ರಕ್ಷಿಸಲಾಗಿದ್ದು, ಇನ್ನೂ ಹಲವಾರು ಮಂದಿಯನ್ನು ಕೆಳಗಿಳಿಸುವ ಕಾರ್ಯ ನಡೆಯುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...