alex Certify
ಕನ್ನಡ ದುನಿಯಾ       Mobile App
       

Kannada Duniya

ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲ್ಲ ತೇಜಸ್ವಿ ಯಾದವ್

tejashwi-yadav-ibnkhabar1

ಬಿಹಾರದ ಮಹಾನ್ ಮೈತ್ರಿ ಮುರಿದು ಬೀಳುವ ಸಾಧ್ಯತೆ ದಟ್ಟವಾಗ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಆರ್ ಜೆ ಡಿ ನಾಯಕ ಲಾಲು ಪ್ರಸಾದ್ ಯಾದವ್ ಮನೆಯಲ್ಲಿಂದು ಶಾಸಕರ ಮಹತ್ವದ ಸಭೆ ನಡೆದಿದೆ. ಸಭೆ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಶಾಸಕರು ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

ಈ ಎಲ್ಲ ನಾಟಕದ ಹಿಂದೆ ಬಿಜೆಪಿ ಕೈವಾಡವಿದೆ ಎಂದು ಕೆಂಡಕಾರಿದ್ದಾರೆ. ಜುಲೈ 27ರಂದು ನಡೆಯುವ ರ್ಯಾಲಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಗಿದೆ. ಜೊತೆಗೆ ರಾಷ್ಟ್ರಪತಿ ಚುನಾವಣೆಗೆ ಬೆಂಬಲ ನೀಡುವ ವಿಚಾರದ ಬಗ್ಗೆಯೂ ಮಾತುಕತೆ ನಡೆದಿದೆ ಎಂದು ಶಾಸಕರು ತಿಳಿಸಿದ್ದಾರೆ.

ಸರ್ಕಾರವನ್ನು ಬೀಳಿಸಲು ಎಲ್ಲ ಪ್ರಯತ್ನವನ್ನು ಬಿಜೆಪಿ ಮಾಡ್ತಾ ಇದೆ. ಲಾಲು ಪ್ರಸಾದ್ ಯಾದವ್ ಮನೆ ಮೇಲೆ ನಡೆದ ಸಿಬಿಐ ದಾಳಿ ಕೂಡ ಬಿಜೆಪಿ ಸಂಚು ಎಂದು ದೂರಿದ್ದಾರೆ. ತೇಜಸ್ವಿ ಯಾದವ್ ಉಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎನ್ನುವ ವಿಷಯವನ್ನೂ ಸಭೆಯಲ್ಲಿ ಸ್ಪಷ್ಟಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...