alex Certify
ಕನ್ನಡ ದುನಿಯಾ       Mobile App
       

Kannada Duniya

ಹಬ್ಬಕ್ಕೆ ಊರಿಗೆ ಹೊರಟವರಿಗೆ ಶಾಕ್..!

ಮುಂಬೈ: ವೇತನ ಹೆಚ್ಚಳ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಮಹಾರಾಷ್ಟ್ರದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಮುಷ್ಕರ ಕೈಗೊಂಡಿದ್ದಾರೆ.

ಇದರಿಂದಾಗಿ ಮಹಾರಾಷ್ಟ್ರ ರಾಜ್ಯಾದ್ಯಂತ ಸರ್ಕಾರಿ ಬಸ್ ಸಂಚಾರ ಸ್ಥಗಿತಗೊಂಡು ದೀಪಾವಳಿಗೆ ಊರಿಗೆ ಹೊರಟಿದ್ದವರು ಪರದಾಡುವಂತಾಗಿದೆ.

ಕರ್ನಾಟಕದಿಂದ ಮಹಾರಾಷ್ಟ್ರಕ್ಕೆ ಹೊರಟಿದ್ದ  KSRTC ಬಸ್ ಗಳ ಸಂಚಾರಕ್ಕೆ ತಡೆ ನೀಡಲಾಗಿದೆ. ಕೊಲ್ಹಾಪುರ ಜಿಲ್ಲೆಯ ಕಾಗಲ್ ಬಳಿ 15 ಕ್ಕೂ ಹೆಚ್ಚು ಬಸ್ ಗಳನ್ನು ಮಹಾರಾಷ್ಟ್ರ ಸಾರಿಗೆ ಸಂಸ್ಥೆ ನೌಕರರು ತಡೆದಿದ್ದಾರೆ.

ಬಳ್ಳಾರಿ –ಪೂನಾ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಗಾಜುಗಳು ಪುಡಿಯಾಗಿವೆ. ಈ ಸಂಬಂಧ ಕಾಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶೇ. 25 ರಷ್ಟು ವೇತನ ಹೆಚ್ಚಳ ಮಾಡುವಂತೆ ಎಂ.ಎಸ್.ಆರ್.ಟಿ.ಸಿ. ಯೂನಿಯನ್ ಸದಸ್ಯರು ಸೋಮವಾರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಸಾರಿಗೆ ಸಚಿವ ದಿವಾಕರ್ ರಾತ್ ಅವರನ್ನು ಭೇಟಿ ಮಾಡಿ ಚರ್ಚಿಸಿದ್ದಾರೆ. ಸರ್ಕಾರ ಶೇ. 10 ರಷ್ಟು ವೇತನ ಹೆಚ್ಚಳ ಮಾಡುವುದಾಗಿ ಹೇಳಿದ್ದರಿಂದ ಮುಷ್ಕರ ಕೈಗೊಳ್ಳಲಾಗಿದೆ. ಇದರಿಂದಾಗಿ ಮಹಾರಾಷ್ಟ್ರದಲ್ಲಿ ಸಾರಿಗೆ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...