alex Certify
ಕನ್ನಡ ದುನಿಯಾ       Mobile App
       

Kannada Duniya

ರಾಹುಲ್ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಸಿಧು

sidu-rahul

ನವದೆಹಲಿ: ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಜ್ಯಸಭೆ ಮಾಜಿ ಸದಸ್ಯ ನವಜೋತ್ ಸಿಂಗ್ ಸಿಧು, ಎ.ಐ.ಸಿ.ಸಿ. ಉಪಾಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.

ಪಂಜಾಬ್ ನಲ್ಲಿ ವಿಧಾನಸಭೆ ಚುನಾವಣೆಗೆ ದಿನಗಳು ಸಮೀಪಿಸುತ್ತಿರುವಂತೆಯೇ, ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಿಧು ಕಾಂಗ್ರೆಸ್ ಸೇರ್ಪಡೆಯೊಂದಿಗೆ ಚುನಾವಣೆ ರಂಗೇರಿದೆ.

ಬಿ.ಜೆ.ಪಿ. ಪಕ್ಷದಿಂದ ದೂರವಾಗಿದ್ದ ಸಿಧು, ತಮ್ಮದೇ ಪಕ್ಷವನ್ನು ಆರಂಭಿಸಿದ್ದರೂ, ಪೂರ್ಣ ಪ್ರಮಾಣದ ತಯಾರಿ ಮಾಡಿಕೊಳ್ಳದ ಕಾರಣ, ಕಾಂಗ್ರೆಸ್ ಸೇರಲು ತೀರ್ಮಾನಿಸಿದ್ದರು.

ಹಿಂದೆಯೇ ಅವರ ಪತ್ನಿ, ಮಾಜಿ ಸಚಿವೆ ನವಜೋತ್ ಕೌರ್ ಬಿ.ಜೆ.ಪಿ.ಗೆ ರಾಜೀನಾಮೆ ನೀಡಿ, ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...