alex Certify
ಕನ್ನಡ ದುನಿಯಾ       Mobile App
       

Kannada Duniya

ಭೀಕರ ಅಪಘಾತದಲ್ಲಿ 14 ಮಂದಿ ಸಾವು

rajkot

ಅಹಮದಾಬಾದ್: ಲಾರಿ ಹಾಗೂ ಮಿನಿಟ್ರಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ, ಸಂಭವಿಸಿದ ಭೀಕರ ಅಪಘಾತದಲ್ಲಿ 14 ಮಂದಿ ಸಾವು ಕಂಡ ಘಟನೆ ರಾಜ್ ಕೋಟ್ ಸಮೀಪದಲ್ಲಿ ನಡೆದಿದೆ.

ಬಾಗೋದಾರ ಹೆದ್ದಾರಿಯ ದೋಲ್ಕಾ ತಾಲ್ಲೂಕಿನ ವಾಲ್ತೇರಾ ಗ್ರಾಮದ ಸಮೀಪದ ಈ ದುರ್ಘಟನೆ ಸಂಭವಿಸಿದೆ. ಮಿನಿ ಟ್ರಕ್ ನಲ್ಲಿ 17 ಮಂದಿ ಪ್ರಯಣಿಸುತ್ತಿದ್ದರು. ಹೆದ್ದಾರಿಯಲ್ಲಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಚಾಲಕರ ನಿಯಂತ್ರಣ ತಪ್ಪಿದ ವಾಹನಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ 10 ಮಂದಿ ಸಾವನ್ನಪ್ಪಿದ್ದಾರೆ. ನಾಲ್ವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಭೀಕರ ಅಪಘಾತದಿಂದಾಗಿ ಈ ಮಾರ್ಗದಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಪೊಲೀಸರು ಅಪಘಾತಕ್ಕೀಡಾಗಿದ್ದ ವಾಹನಗಳನ್ನು ತೆರವುಗೊಳಿಸಿದ ನಂತರ ಸಂಚಾರ ವ್ಯವಸ್ಥೆ ಸರಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...