alex Certify
ಕನ್ನಡ ದುನಿಯಾ       Mobile App
       

Kannada Duniya

ರಸ್ತೆಯಲ್ಲಿ ಸಿಗ್ತು ಬ್ಯಾಗ್ ನಲ್ಲಿ ತುಂಬಿದ್ದ ಹೆಣ್ಣು ಶಿಶು

girl

ಕೇಂದ್ರ ಸರ್ಕಾರದ ‘ಬೇಟಿ ಬಚಾವೋ ಬೇಟಿ ಪಡಾವೋ’ ಯೋಜನೆ ಸಾಕಷ್ಟು ಜನಪ್ರಿಯತೆ ಗಳಿಸಿದೆ. ಎಲ್ಲ ಕ್ಷೇತ್ರಗಳಲ್ಲೂ ಮಹಿಳೆಯರು ತಮ್ಮ ಛಾಪು ಮೂಡಿಸ್ತಿದ್ದಾರೆ. ಇಷ್ಟರ ನಡುವೆಯೂ ಹೆಣ್ಣು ಭ್ರೂಣ ಹತ್ಯೆ ಹಾಗೂ ಹೆಣ್ಣು ಮಗುವನ್ನು ತಿರಸ್ಕಾರದಿಂದ ನೋಡುವುದು ನಮ್ಮ ಸಮಾಜದಲ್ಲಿ ನಿಂತಿಲ್ಲ.

ಅಹಮದಾಬಾದ್ ನಲ್ಲಿ ಏಳು ದಿನದ ಹೆಣ್ಣು ಮಗುವನ್ನು ತಾಯಿಯೊಬ್ಬಳು ರಸ್ತೆಯಲ್ಲಿ ಬಿಟ್ಟು ಹೋದ ಘಟನೆ ಬೆಳಕಿಗೆ ಬಂದಿದೆ. ಬೆಳ್ಳಂಬೆಳಿಗ್ಗೆ ಶಿಶುವನ್ನು ಬ್ಯಾಗ್ ನಲ್ಲಿ ತುಂಬಿ ರಸ್ತೆ ಬದಿ ಎಸೆದು ಹೋಗಿದ್ದಾಳೆ ಮಹಾತಾಯಿ.

ಮಗು ಅಳುವ ಶಬ್ದ ಕೇಳಿದ ಸುತ್ತಮುತ್ತಲಿನ ಜನರು ಅಲ್ಲಿಗೆ ಓಡಿ ಬಂದಿದ್ದಾರೆ. ಮಗು ಬ್ಯಾಗ್ ನಲ್ಲಿರುವುದನ್ನು ನೋಡಿ ತಕ್ಷಣ 108 ಹಾಗೂ ಪೊಲೀಸರಿಗೆ ಕರೆ ಮಾಡಿದ್ದಾರೆ. ಸದ್ಯ ಮಗು ಆಸ್ಪತ್ರೆಯಲ್ಲಿದ್ದು, ಆರೋಗ್ಯವಾಗಿದ್ದಾಳೆಂದು ವೈದ್ಯರು ತಿಳಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮಗುವಿನ ಪಾಲಕರ ಹುಡುಕಾಟ ನಡೆಸುತ್ತಿದ್ದಾರೆ.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...