alex Certify
ಕನ್ನಡ ದುನಿಯಾ       Mobile App
       

Kannada Duniya

ಮೋದಿ ರೋಡ್ ಶೋಗೆ ಅನುಮತಿ ನೀಡದ ಪೊಲೀಸರು…!

ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಮುಕ್ತಾಯವಾಗಿದ್ದು, 2 ನೇ ಹಂತದಲ್ಲಿ ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ.

ಅಹಮದಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿದ್ದ ರ್ಯಾಲಿ ಮತ್ತು ರೋಡ್ ಶೋಗೆ ಪೊಲೀಸರು ಅನುಮತಿ ನೀಡಲು ನಿರಾಕರಿಸಿದ್ದಾರೆ.

ಗುಜರಾತ್ ಆರ್ಥಿಕ ರಾಜಧಾನಿ ಅಹಮದಾಬಾದ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಚಾರ ಕೈಗೊಂಡಿದ್ದರು. ರೋಡ್ ಶೋ ಮೂಲಕ ಪ್ರಚಾರ ನಡೆಸುವುದು ಅವರ ಉದ್ದೇಶವಾಗಿತ್ತು.

ಆದರೆ, ಕಾನೂನು ಸುವ್ಯಸ್ಥೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗುವ ಕಾರಣಕ್ಕೆ ರೋಡ್ ಶೋ, ರ್ಯಾಲಿಗೆ ಅನುಮತಿ ನೀಡಲು ಪೊಲೀಸರು ನಿರಾಕರಿಸಿದ್ದಾರೆ.

ಒಂದೇ ದಿನ ಇಬ್ಬರು ನಾಯಕರು ಪ್ರಚಾರ ಕೈಗೊಂಡಲ್ಲಿ ಸಮಸ್ಯೆಯಾಗಬಹುದೆಂಬ ಕಾರಣದಿಂದ ಅನುಮತಿ ನೀಡದಿರಲು ಪೊಲೀಸರು ನಿರ್ಧರಿಸಿದ್ದಾರೆ. ಈ ಹಿನ್ನಲೆಯಲ್ಲಿ ಮೋದಿ ಮತ್ತು ರಾಹುಲ್ ಅವರ ರೋಡ್ ರದ್ದುಪಡಿಸಲಾಗಿದೆ.

2 ನೇ ಹಂತದ ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ರಾಜಕೀಯ ಪಕ್ಷಗಳ ನಾಯಕರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಪೊಲೀಸರು ಅನುಮತಿ ನೀಡದ ಕಾರಣ ಅಹಮದಾಬಾದ್ ನಲ್ಲಿ ನಡೆಯಬೇಕಿದ್ದ ಮೋದಿ ರೋಡ್ ಶೋ ಮತ್ತು ರಾಹುಲ್ ರ್ಯಾಲಿ ರದ್ದುಪಡಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...