alex Certify
ಕನ್ನಡ ದುನಿಯಾ       Mobile App
       

Kannada Duniya

ಚುನಾವಣೆ ವೇಳೆಯಲ್ಲೇ ಗುಜರಾತ್ ನಲ್ಲಿ ಆತಂಕ

ಅಹಮದಾಬಾದ್: ಗುಜರಾತ್ ನಲ್ಲಿ ವಿಧಾನಸಭೆ ಚುನಾವಣೆ ಕಾವು ಏರತೊಡಗಿದೆ. ಪ್ರಚಾರದ ಭರಾಟೆ ಮುಗಿಲು ಮುಟ್ಟಿದ್ದು, ಇದೇ ವೇಳೆ ಆತಂಕಕಾರಿ ಬೆಳವಣಿಗೆಯೊಂದು ನಡೆದಿದೆ.

ಅಹಮದಾಬಾದ್ ರೈಲ್ವೇ ನಿಲ್ದಾಣದಲ್ಲಿ ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ. ರೈಲ್ವೇ ಕಂಟ್ರೋಲ್ ರೂಂಗೆ ಕರೆ ಮಾಡಿದ ಅಪರಿಚಿತರು ನಿಲ್ದಾಣದಲ್ಲಿ ಬಾಂಬ್ ಇಟ್ಟಿದ್ದು, ಸ್ಪೋಟಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ರೈಲ್ವೇ ಪೊಲೀಸರು, ಬಾಂಬ್ ನಿಷ್ಕ್ರಿಯದಳದ ಸಿಬ್ಬಂದಿ ಇಡೀ ನಿಲ್ದಾಣವನ್ನು ಶೋಧಿಸಿದ್ದಾರೆ. ಶ್ವಾನದಳದೊಂದಿಗೆ ಪರಿಶೀಲನೆ ನಡೆಸಲಾಗಿದೆ.

ಕರೆ ಮಾಡಿದವರ ಮಾಹಿತಿಯನ್ನು ಕಲೆಹಾಕಲಾಗುತ್ತಿದೆ. ರೈಲ್ವೇ ನಿಲ್ದಾಣದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...