alex Certify
ಕನ್ನಡ ದುನಿಯಾ       Mobile App
       

Kannada Duniya

ಪನ್ನೀರ್ ಸೆಲ್ವಂ ರಾಜೀನಾಮೆ, ಶಶಿಕಲಾ ಸಿ.ಎಂ.

pane

ಚೆನ್ನೈ: ತಮಿಳುನಾಡಿನಲ್ಲಿ ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ, ಮುಖ್ಯಮಂತ್ರಿ ಒ.ಪನ್ನೀರ್ ಸೆಲ್ವಂ ರಾಜೀನಾಮೆ ನೀಡಿದ್ದಾರೆ.

ಮುಂದಿನ ಮುಖ್ಯಮಂತ್ರಿಯಾಗಿ ಎ.ಐ.ಎ.ಡಿ.ಎಂ.ಕೆ. ಪ್ರಧಾನ ಕಾರ್ಯದರ್ಶಿ ಶಶಿಕಲಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಚೆನ್ನೈನ ರಾಯಪೇಟೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಎ.ಐ.ಎ.ಡಿ.ಎಂ.ಕೆ. ಶಾಸಕಾಂಗ ಸಭೆ ನಡೆದಿದ್ದು, ಸಭೆಯಲ್ಲಿಯೇ ಸಿ.ಎಂ. ಸ್ಥಾನಕ್ಕೆ ರಾಜೀನಾಮೆ ನೀಡಿದ ಪನ್ನೀರ್ ಸೆಲ್ವಂ, ಮುಂದಿನ ಮುಖ್ಯಮಂತ್ರಿಯಾಗಿ ಚಿನ್ನಮ್ಮ ಶಶಿಕಲಾ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಘೋಷಿಸಿದ್ದಾರೆ.

ಅಲ್ಲದೇ, ತಮ್ಮ ರಾಜೀನಾಮೆ ಪತ್ರವನ್ನು ಫ್ಯಾಕ್ಸ್ ಮೂಲಕ ರಾಜ್ಯಪಾಲರಿಗೆ ಕಳುಹಿಸಿದ್ದಾರೆ.

ಶಶಿಕಲಾ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಿದ ಶಾಸಕಾಂಗ ಸಭೆಯ ನಿರ್ಣಯವನ್ನು ಶಶಿಕಲಾ ಅವರಿಗೆ ಕೊಡಲು ಪನ್ನೀರ್ ಸೆಲ್ವಂ ಹಾಗೂ ಸಚಿವರು ಶಶಿಕಲಾ ನಿವಾಸಕ್ಕೆ ತೆರಳಿದ್ದಾರೆ.

ಇಂದು ಸಂಜೆ ರಾಜ್ಯಪಾಲರನ್ನು ಶಶಿಕಲಾ ಭೇಟಿ ಮಾಡಲಿದ್ದಾರೆ. ನಾಳೆ ಇಲ್ಲವೇ ಫೆಬ್ರವರಿ 9 ರಂದು ಶಶಿಕಲಾ ತಮಿಳುನಾಡು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...