alex Certify
ಕನ್ನಡ ದುನಿಯಾ       Mobile App
       

Kannada Duniya

ಶಶಿಕಲಾ ವಿರುದ್ದ ದಾಖಲಾಯ್ತು ಕಿಡ್ನಾಪ್ ಕೇಸ್

sasikala-mgrಅಕ್ರಮ ಆಸ್ತಿ ಸಂಪಾದನೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ನಿಂದ ಶಿಕ್ಷೆಗೊಳಗಾಗಿರುವ ಎಐಎಡಿಎಂಕೆ ಪ್ರಧಾನ ಕಾರ್ಯದರ್ಶಿ ಶಶಿಕಲಾರಿಗೆ ಈಗ ಮತ್ತೊಂದು ಸಂಕಷ್ಟ ಎದುರಾಗಿದೆ.

ಮಧುರೈ ಕ್ಷೇತ್ರದ ಎಐಎಡಿಎಂಕೆ ಶಾಸಕ ಶರವಣನ್, ಶಶಿಕಲಾ ಹಾಗೂ ಕೆ. ಪಳನಿಸ್ವಾಮಿ ವಿರುದ್ದ ಕೋವತ್ತೂರು ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದು, ತಮ್ಮನ್ನು ಅಪಹರಿಸಿ ಗೋಲ್ಡನ್ ಬೇ ರೆಸಾರ್ಟ್ ನಲ್ಲಿರಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

ವಿವಿಧ ಕಲಂಗಳಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇನ್ನೂ ರೆಸಾರ್ಟ್ ನಲ್ಲಿಯೇ ಇರುವ ಪಳನಿಸ್ವಾಮಿಯವರ ವಿಚಾರಣೆ ನಡೆಸಲಿದ್ದಾರೆಂದು ತಿಳಿದುಬಂದಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಬೆಂಗಳೂರು ನ್ಯಾಯಾಲಯಕ್ಕೆ ಶರಣಾಗಲು ಶಶಿಕಲಾರವರು ತೆರಳುತ್ತಿರುವ ಹಿನ್ನಲೆಯಲ್ಲಿ ಮುಂದಿನ ದಿನಗಳಲ್ಲಿ ಅವರ ವಿಚಾರಣೆಯನ್ನೂ ಪೊಲೀಸರು ನಡೆಸಲಿದ್ದಾರೆನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...