alex Certify
ಕನ್ನಡ ದುನಿಯಾ       Mobile App
       

Kannada Duniya

ಮುಖ್ಯಮಂತ್ರಿಯಾಗಿ ಶಶಿಕಲಾ ನಟರಾಜನ್

sasikla-nat-r

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ನಿಧನದ ಬಳಿಕ, ರಾಜಕೀಯದಲ್ಲಿ ಮಹತ್ವದ ಬದಲಾವಣೆಗಳಾಗುತ್ತಿವೆ.

ನಿನ್ನೆಯಷ್ಟೇ ಎ.ಐ.ಎ.ಡಿ.ಎಂ.ಕೆ. ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲು ಪಕ್ಷದ ಪ್ರಮುಖರು ತೀರ್ಮಾನಿಸಿದ್ದಾರೆ.

ಚೆನ್ನೈನ ರಾಯಪೇಟೆಯಲ್ಲಿರುವ ಪಕ್ಷದ ಕಚೇರಿಯಲ್ಲಿ ಇಂದು ಸಂಜೆ ನಡೆಯಲಿರುವ ಶಾಸಕಾಂಗ ಸಭೆಯಲ್ಲಿ ಶಶಿಕಲಾ ನಟರಾಜನ್ ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಆಯ್ಕೆ ಮಾಡಲಾಗುವುದು.

ಎಲ್ಲಾ 134 ಶಾಸಕರಿಗೂ ಶಾಸಕಾಂಗ ಸಭೆಗೆ ಆಗಮಿಸುವಂತೆ ಸೂಚನೆ ನೀಡಲಾಗಿದೆ. ಮುಖ್ಯಮಂತ್ರಿ ಪನ್ನೀರ್ ಸೆಲ್ವಂ ಬದಲಿಗೆ ಶಶಿಕಲಾ ನಟರಾಜನ್ ಅವರನ್ನು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗುವುದು ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...