alex Certify
ಕನ್ನಡ ದುನಿಯಾ       Mobile App
       

Kannada Duniya

‘ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಎನ್ನುವವರಿಗೆ ಜೈಲು ಶಿಕ್ಷೆ ವಿಧಿಸಿ’

ಭಾರತದಲ್ಲಿ ನೆಲೆಸಿರುವ ಮುಸ್ಲಿಮರನ್ನು ಪಾಕಿಸ್ತಾನಿ ಎಂದು ಕರೆಯುವವರಿಗೆ ಜೈಲು ಶಿಕ್ಷೆ ವಿಧಿಸುವ ಕಾನೂನು ರೂಪಿಸಬೇಕೆಂದು ಲೋಕಸಭಾ ಸದಸ್ಯ ಅಸಾದುದ್ದೀನ್ ಓವೈಸಿ ಆಗ್ರಹಿಸಿದ್ದಾರೆ.

ಮಂಗಳವಾರದಂದು ಲೋಕಸಭಾ ಅಧಿವೇಶನದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅಖಿಲ ಭಾರತ ಮಜ್ಲಿಸ್ ಇ ಇಥೇಹಾದುಲ್ ಮುಸಲ್ಮಿನ್ (ಎಐಎಂಐಎಂ) ಅಧ್ಯಕ್ಷರೂ ಆದ ಓವೈಸಿ, ಭಾರತೀಯ ಮುಸ್ಲಿಮರನ್ನು ಪಾಕಿಸ್ತಾನಿ ಎನ್ನುವವರಿಗೆ ಕನಿಷ್ಟ ಪಕ್ಷ 3 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸುವ ಕಾನೂನು ರೂಪಿಸಬೇಕೆಂದು ಒತ್ತಾಯಿಸಿದರು.

ಈ ಹಿಂದೆ ಓವೈಸಿ, ಕೇಂದ್ರ ಸರ್ಕಾರ ತ್ರಿವಳಿ ತಲಾಕ್ ನಿಷೇಧಿಸಲು ಮುಂದಾಗಿದ್ದನ್ನು ಆಕ್ಷೇಪಿಸಿದ್ದರು. ಕಾನೂನು, ಕಾಯ್ದೆ ರೂಪಿಸುವ ಮೂಲಕ ಇದಕ್ಕೆ ಕಡಿವಾಣ ಹಾಕಲು ಸಾಧ್ಯವಾಗದು. ಮುಸ್ಲಿಂ ಪುರುಷರನ್ನು ಜೈಲಿಗಟ್ಟಲು ತ್ರಿವಳಿ ತಲಾಕ್ ನಿಷೇಧಕ್ಕೆ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದ್ದರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...