alex Certify
ಕನ್ನಡ ದುನಿಯಾ       Mobile App
       

Kannada Duniya

ಮುಂಬೈ ಏರ್ಪೋರ್ಟಿನಲ್ಲಿ ಸ್ವಲ್ಪದರಲ್ಲಿ ತಪ್ಪಿದೆ ಭಾರಿ ಅವಘಡ

ಮಂಗಳವಾರ ಮಧ್ಯಾಹ್ನ ಆಂಧ್ರಪ್ರದೇಶದ ವಿಜಯವಾಡದಿಂದ ಹೊರಟಿದ್ದ ಏರ್ ಇಂಡಿಯಾ ವಿಮಾನ ಮುಂಬೈ ವಿಮಾನ ನಿಲ್ದಾಣ ತಲುಪಿದ್ದು, ರನ್ ವೇ ಹದಿನಾಲ್ಕರ ಮೇಲೆ ಇಳಿಯುತ್ತಿದ್ದಾಗ ಸ್ಕಿಡ್ ಆಗಿದೆ. ಈ ದುರಂತ ರನ್ ವೇ ಯಲ್ಲಿ ಅತಿಯಾದ ನೀರು ನಿಂತಿದ್ದರಿಂದ ಸಂಭವಿಸಿದೆ ಎಂದು ಹೇಳಲಾಗಿದೆ.

ಅದೃಷ್ಟವಶಾತ್ ಈ ಸಂದರ್ಭದಲ್ಲಿ ಯಾವುದೇ ಹಾನಿ ಸಂಭವಿಸಿಲ್ಲ ಎಂದು ಏರ್ ಇಂಡಿಯಾ ಅಧಿಕಾರಿಗಳು ತಿಳಿಸಿದ್ದಾರೆ. ಇದಕ್ಕೆಲ್ಲ ಕಾರಣ ನಾಲ್ಕು ದಿನಗಳಿಂದ ಸತತವಾಗಿ ಮುಂಬೈನಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ.

ಮಳೆಯಿಂದ ವಿಮಾನ ಹಾರಾಟಕ್ಕೆ ತೊಂದರೆ ಆಗಿರುವುದಲ್ಲದೇ ಲೋಕಲ್ ಟ್ರೈನ್ ಗಳ ಸಂಚಾರಕ್ಕೂ ಅಡ್ಡಿಯಾಗಿದೆ. ಬಸ್ ಸಂಚಾರ ಕೂಡ ಅಸ್ತವ್ಯಸ್ತವಾಗಿದೆ. ಮುಂಬೈ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ನೀರು ನಿಂತಿರುವ ದೃಶ್ಯಾವಳಿ ಕಂಡುಬರುತ್ತಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...