alex Certify
ಕನ್ನಡ ದುನಿಯಾ       Mobile App
       

Kannada Duniya

ಕೂದಲೆಳೆಯಲ್ಲಿ ಬಚಾವ್ ಆದ್ರು ಏರ್ ಇಂಡಿಯಾದ 130 ಪ್ರಯಾಣಿಕರು

ತಿರುಚಿ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ದೊಡ್ಡ ದುರ್ಘಟನೆಯಿಂದ ಕೂದಲೆಳೆ ಅಂತರದಲ್ಲಿ ಬಚಾವ್ ಆಗಿದೆ. ಶುಕ್ರವಾರ ಬೆಳಗಿನ ಜಾವ ಟೇಕ್ ಆಪ್ ವೇಳೆ ವಿಮಾನ ಸರಹದ್ದು ಗೋಡೆಗೆ ಬಡಿದಿದೆ. ವಿಮಾನದ ಮುಂದಿನ ಚಕ್ರ ಗೋಡೆಗೆ ಬಡಿದಿದ್ದು, ಅದೃಷ್ಟವಶಾತ್ ಪ್ರಯಾಣಿಕರಿಗೆ ಯಾವುದೇ ತೊಂದರೆಯಾಗಿಲ್ಲ.

ಏರ್ ಇಂಡಿಯಾ ವಿಮಾನದಲ್ಲಿ 130 ಮಂದಿ ಪ್ರಯಾಣ ಬೆಳೆಸಿದ್ದರು ಎನ್ನಲಾಗಿದೆ. ಈ ಘಟನೆ ನಂತ್ರ ಪ್ರಯಾಣಿಕರನ್ನು ಮುಂಬೈಗೆ ಕಳುಹಿಸಲಾಗಿದೆ. ಗೋಡೆಗೆ ಡಿಕ್ಕಿ ಹೊಡೆದ ಕಾರಣ ವಿಮಾನದ ಮುಂಭಾಗಕ್ಕೆ ಹಾನಿಯಾಗಿದೆ. ತನಿಖೆ ನಡೆಸಿದ ತಜ್ಞರು ಹಾರಾಟಕ್ಕೆ ಯೋಗ್ಯವೆಂದು ವರದಿ ನೀಡಿದ್ದಾರೆ. ನಂತ್ರ ವಿಮಾನ ದುಬೈ ಬದಲು ಮುಂಬೈಗೆ ಪ್ರಯಾಣ ಬೆಳೆಸಿದೆ.

ತನಿಖೆ ಪೂರ್ಣಗೊಳ್ಳುವವರೆಗೆ ಚಾಲಕ ಹಾಗೂ ಸಹ ಚಾಲಕನನ್ನು ಕೆಲಸದಿಂದ ವಜಾ ಮಾಡಲಾಗಿದೆ. ಏರ್ ಇಂಡಿಯಾ ಘಟನೆ ಬಗ್ಗೆ ಮಾಹಿತಿ ನೀಡಿದೆ. ವಿಮಾನಯಾನ ಸಚಿವರು ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದಾರೆ. ಸುರೇಶ್ ಪ್ರಭು ಘಟನೆಯ ತನಿಖೆಗೆ ಆದೇಶ ನೀಡಿದ್ದಾರೆ. ಪ್ರಯಾಣಿಕರ ಸುರಕ್ಷತೆಗೆ ಹೆಚ್ಚಿನ ಕ್ರಮಕೈಗೊಳ್ಳಿ ಎಂದು ಸಚಿವರು ಸೂಚನೆ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...