alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ಸೇರಿ 24 ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್

07_10_2016-07alert

ಪಾಕಿಸ್ತಾನ ಗಡಿಯಲ್ಲಿ ಭಾರತ ಸೇನೆ ದಾಳಿ ನಡೆಸಿದ ಬಳಿಕ ದೇಶದೊಳಗೆ  ಭದ್ರತೆ ಹೆಚ್ಚಿಸಲಾಗಿದೆ. ಭಯೋತ್ಪಾದಕರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂಬ ಗುಪ್ತಚರ ಮಾಹಿತಿ ಮೇರೆಗೆ ದೇಶದ 24 ವಿಮಾನ ನಿಲ್ದಾಣಗಳಿಗೆ ಬಿಗಿ ಭದ್ರತೆ ಹೆಚ್ಚಿಸಲಾಗಿದೆ.

ಪಾಕ್ ಗಡಿಯ ಪಂಜಾಬ್, ಗುಜರಾತ್, ದೆಹಲಿ, ಜಮ್ಮುಕಾಶ್ಮೀರ ಹಾಗೂ ರಾಜಸ್ಥಾನದ ಎಲ್ಲ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು, ದೆಹಲಿ, ಹೈದ್ರಾಬಾದ್, ಮುಂಬೈ ವಿಮಾನ ನಿಲ್ದಾಣಗಳ ಮೇಲೆ ಭದ್ರತಾ ಪಡೆ ನಿಗಾ ಇಡಲಿದೆ. ಪ್ರಯಾಣಿಕ ಬ್ಯಾಗ್, ಸರಕು ಸಾಗಣೆ ಸ್ಥಳಗಳ ಮೇಲೆ ಕಣ್ಣಿಡಲಿದೆ.

ಪಾಕ್ ಗಡಿಯಲ್ಲಿ ಭಾರತ ನಡೆಸಿದ ದಾಳಿಯ ನಂತ್ರ ಲಷ್ಕರ್ ಸೇರಿದಂತೆ ಪಾಕ್ ನ ಭಯೋತ್ಪಾದನಾ ಸಂಘಟನೆಗಳು ಭಾರತದಲ್ಲಿ ದಾಳಿ ನಡೆಸಲು ಸಂಚು ರೂಪಿಸುತ್ತಿವೆ ಎಂದು ಗುಪ್ತಚರ ಇಲಾಖೆ ಹೇಳಿದೆ. ಹಬ್ಬದ ಸೀಸನ್ ನಲ್ಲಿ ಪ್ರಮುಖ ನಗರಗಳ ಜನಸಂದಣಿ ಪ್ರದೇಶಗಳು ಭಯೋತ್ಪಾದಕರ ಗುರಿಯಾಗಿವೆ. ಹಾಗಾಗಿ ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಸಿ ಐ ಎಸ್ ಎಫ್ ನಿರ್ದೇಶಕ ಜನರಲ್ ಓ.ಪಿ ಸಿಂಗ್ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...