alex Certify
ಕನ್ನಡ ದುನಿಯಾ       Mobile App
       

Kannada Duniya

ಮತ್ತೆ ಯಾದವೀ ಕಲಹ: ಅಖಿಲೇಶ್ ರಾಷ್ಟ್ರೀಯ ಅಧ್ಯಕ್ಷ

ak-pres

ಲಖ್ನೋ: ಉತ್ತರ ಪ್ರದೇಶ ಚುನಾವಣೆ ಸಮೀಪಿಸುತ್ತಿರುವಂತೆಯೇ, ಸಮಾಜವಾದಿ ಪಕ್ಷದಲ್ಲಿ ತಾರಕಕ್ಕೇರಿದ ಭಿನ್ನಮತ ಬೇರೆ ಸ್ವರೂಪ ಪಡೆದುಕೊಂಡಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಮುಲಾಯಂ ಸಿಂಗ್ ಯಾದವ್ ಅವರನ್ನು ಬದಲಿಸಿ, ಅಖಿಲೇಶ್ ಸಿಂಗ್ ತಮ್ಮ ತೆಕ್ಕೆಗೆ ಪಕ್ಷವನ್ನು ತೆಗೆದುಕೊಂಡಿದ್ದಾರೆ. ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಎರಡು ದಿನಗಳ ಹಿಂದಷ್ಟೇ ಮುಖ್ಯಮಂತ್ರಿ ಅಖಿಲೇಶ್ ಸಿಂಗ್ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ಅವರನ್ನು ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಉಚ್ಚಾಟನೆ ಮಾಡಿದ್ದರು.

ಆದರೆ, ಅಖಿಲೇಶ್ ಕಡೆ ಹೆಚ್ಚಿನ ಸಂಖ್ಯೆಯ ಶಾಸಕರು ಕಾಣಿಸಿಕೊಂಡಿದ್ದರಿಂದ ಉಚ್ಚಾಟನೆ ವಾಪಸ್ ಪಡೆಯಲಾಗಿತ್ತು.

ಇದರ ಬೆನ್ನಲ್ಲೇ ಇಂದು ಲಖ್ನೋದಲ್ಲಿ ಮುಲಾಯಂ ಗೈರು ಹಾಜರಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಿ, ಅಖಿಲೇಶ್ ಅವರನ್ನು ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ.

ಮುಲಾಯಂ ಸಿಂಗ್ ಪಕ್ಷದ ಮಾರ್ಗದರ್ಶಕರಾಗಿರುತ್ತಾರೆ. ಇದರೊಂದಿಗೆ ರಾಜ್ಯಾಧ್ಯಕ್ಷ ಹುದ್ದೆಯಿಂದ ಶಿವಪಾಲ್ ಯಾದವ್ ವಜಾಗೊಂಡಿದ್ದು, ಪಕ್ಷದಿಂದ ಅಮರ್ ಸಿಂಗ್ ಅವರನ್ನು ಕೈ ಬಿಡಲಾಗಿದೆ ಎಂದು ಪ್ರಧಾನ ಕಾರ್ಯದರ್ಶಿ ರಾಮ್ ಗೋಪಾಲ್ ಯಾದವ್ ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ ಮಾತನಾಡಿದ ಅಖಿಲೇಶ್, ಕುಟುಂಬ ಹಾಗೂ ಪಕ್ಷವನ್ನು ಉಳಿಸಬೇಕಾದ ಜವಾಬ್ದಾರಿ ನನ್ನ ಮೇಲಿದೆ. ತಂದೆಯವರ ಮಾರ್ಗದರ್ಶನದಲ್ಲಿ ಪಕ್ಷ ಮುನ್ನಡೆಯಲಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...