alex Certify
ಕನ್ನಡ ದುನಿಯಾ       Mobile App
       

Kannada Duniya

ಎಸ್ಪಿ ಅಧ್ಯಕ್ಷ ಸ್ಥಾನಕ್ಕೆ ಅಖಿಲೇಶ್ ಯಾದವ್ ಗುಡ್ ಬೈ?

akhilesh-kgmb-621x414livemint

ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಸ್ಥಾನ ತೊರೆಯುವ ಬಗ್ಗೆ ಉತ್ತರಪ್ರದೇಶ ಮಾಜಿ ಸಿಎಂ ಅಖಿಲೇಶ್ ಯಾದವ್ ಸುಳಿವು ನೀಡಿದ್ದಾರೆ. ಸಪ್ಟೆಂಬರ್ 30ರೊಳಗೆ ಸಮಾಜವಾದಿ ಪಕ್ಷಕ್ಕೆ ನೂತನ ಸಾರಥಿಯ ಆಯ್ಕೆಯಾಗಲಿದೆ ಅಂತಾ ಹೇಳಿದ್ದಾರೆ. ಇವತ್ತು ಪಕ್ಷದ ಮುಖಂಡರೊಂದಿಗೆ ಸಭೆ ನಡೆಸಿದ ಅಖಿಲೇಶ್, ಚುನಾವಣೆ ಸೋಲಿನ ಕುರಿತು ಪರಾಮರ್ಶೆ ನಡೆಸಿದ್ರು.

ಸೋಲಿನ ಕಾರಣಗಳ ಬಗ್ಗೆ ಚರ್ಚೆ ನಡೆಸಿದ್ದು, ಶೀಘ್ರದಲ್ಲೇ ಅದನ್ನೆಲ್ಲ ಬಗೆಹರಿಸುವ ನಿಟ್ಟಿನಲ್ಲಿ ಪಕ್ಷ ಕೆಲಸ ಮಾಡಲಿದೆ ಎಂದಿರುವ ಅಖಿಲೇಶ್, ಎಪ್ರಿಲ್ 15ರಿಂದ ಉತ್ತರಪ್ರದೇಶದಾದ್ಯಂತ ಸಮಾಜವಾದಿ ಪಕ್ಷದ ಸದಸ್ಯತ್ವ ಅಭಿಯಾನ ಆರಂಭಿಸೋದಾಗಿ ತಿಳಿಸಿದ್ದಾರೆ. ನಂತರವಷ್ಟೇ ಪಕ್ಷದ ನೂತನ ಅಧ್ಯಕ್ಷರ ಆಯ್ಕೆಯಾಗಲಿದೆ ಎಂದಿದ್ದಾರೆ. ಆದ್ರೆ ಇವತ್ತು ನಡೆದ ಪಕ್ಷದ ಸಭೆಯಲ್ಲಿ ಮುಲಾಯಂ ಸಿಂಗ್ ಯಾದವ್ ಹಾಗೂ ಶಿವಪಾಲ್ ಯಾದವ್ ಪಾಲ್ಗೊಂಡಿರಲಿಲ್ಲ.

ಇತ್ತೀಚೆಗಷ್ಟೆ ನಡೆದ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಸಮಾಜವಾದಿ ಪಕ್ಷದ ಸಾರಥ್ಯ ವಹಿಸಿದ್ದ ಅಖಿಲೇಶ್ ಯಾದವ್ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡಿದ್ದರು. ಆದ್ರೆ ರಾಹುಲ್ ಹಾಗೂ ಅಖಿಲೇಶ್ ದೋಸ್ತಿಗೆ ಚುನಾವಣೆಯಲ್ಲಿ ತೀವ್ರ ಮುಖಭಂಗವಾಗಿತ್ತು. ಬಿಜೆಪಿ ಭಾರೀ ಬಹುಮತದೊಂದಿಗೆ ಉತ್ತರಪ್ರದೇಶದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿತ್ತು.

 

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...