alex Certify
ಕನ್ನಡ ದುನಿಯಾ       Mobile App
       

Kannada Duniya

ಡಿಗ್ರಿ ಕಾಲೇಜಿನ ಶೌಚಾಲಯದಲ್ಲಿ ಸಿಸಿ ಟಿವಿ….

ಅಲಿಗಢ ಡಿಗ್ರಿ ಕಾಲೇಜೊಂದು ನಕಲು ತಡೆಯಲು ವಿಭಿನ್ನ ಮಾರ್ಗವನ್ನು ಅನುಸರಿಸಿದೆ. ಧರ್ಮ ಸಮಾಜ ಡಿಗ್ರಿ ಕಾಲೇಜಿನ ಶೌಚಾಲಯದಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ. ಕಾಲೇಜಿನಲ್ಲಿರುವ ವಿದ್ಯಾರ್ಥಿಗಳ ಮೂರು ಶೌಚಾಲಯಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ.

ಧರ್ಮ ಸಮಾಜ ಕಾಲೇಜಿನ ಪ್ರಿನ್ಸಿಪಾಲ್ ಹೇಮಪ್ರಕಾಶ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಕಾಲೇಜಿನಲ್ಲಿ ನಕಲು ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗ್ತಿದೆ. ಶೌಚಾಲಯಕ್ಕೆ ಹೋಗುವ ವಿದ್ಯಾರ್ಥಿಗಳು ಬಟ್ಟೆಯೊಳಗೆ ನಕಲು ಚೀಟಿಗಳನ್ನು ಇಟ್ಟುಕೊಂಡು ಬರ್ತಾರೆ. ಇದನ್ನು ತಡೆಯಲು ಸಿಸಿ ಟಿವಿ ಅಳವಡಿಸಲಾಗಿದೆ ಎಂದಿದ್ದಾರೆ.

ಸಿಸಿ ಟಿವಿಯಿಂದ ವಿದ್ಯಾರ್ಥಿಗಳ ಗೌಪ್ಯತೆಗೆ ಯಾವುದೇ ಅಡ್ಡಿಯುಂಟಾಗುವುದಿಲ್ಲ ಎಂದು ಪ್ರಿನ್ಸಿಪಾಲ್ ಹೇಳಿದ್ದಾರೆ. ಕಾಲೇಜಿನ ಕ್ರಮ ಖಂಡಿಸಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...