alex Certify
ಕನ್ನಡ ದುನಿಯಾ       Mobile App
       

Kannada Duniya

ಸೋಶಿಯಲ್ ಮೀಡಿಯಾದಲ್ಲಿ ಟ್ರೆಂಡಿಂಗ್ ಆಗಿರುವ ಜಯದೇವ್ ಗಲ್ಲಾ ಯಾರು ಗೊತ್ತಾ?

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಎನ್ ಡಿ ಎ ಸರ್ಕಾರದ ವಿರುದ್ಧ ಟಿಡಿಪಿ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಲೋಕಸಭೆಯಲ್ಲಿ ಇದರ ಚರ್ಚೆ ನಡೆಯುತ್ತಿದೆ. ಇದರ ಮಧ್ಯೆ ಅವಿಶ್ವಾಸ ನಿರ್ಣಯ ಮಂಡಿಸಿದ ಟಿಡಿಪಿ ಸಂಸದ ಜಯದೇವ್ ಗಲ್ಲಾ ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡಿಂಗ್ ಟಾಪಿಕ್ ಆಗಿದ್ದಾರೆ.

2014 ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿರುವ ಜಯದೇವ್ ಗಲ್ಲಾ ಓರ್ವ ಯಶಸ್ವಿ ಉದ್ಯಮಿ. 52 ವರ್ಷದ ಜಯದೇವ್ ಗಲ್ಲಾ ಗುಂಟೂರು ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಚುನಾವಣೆ ಸಂದರ್ಭದಲ್ಲಿ ಅವರು ಘೋಷಿಸಿಕೊಂಡ ಆಸ್ತಿ 680 ಕೋಟಿ ರೂಪಾಯಿ.

ಅಮರ ರಾಜ ಗ್ರೂಪ್ ನ ಮ್ಯಾನೇಜಿಂಗ್ ಡೈರೆಕ್ಟರ್ ಆಗಿರುವ ಜಯದೇವ್, ತೆಲುಗು ನಟರೊಬ್ಬರ ಪುತ್ರಿಯನ್ನು ವಿವಾಹವಾಗಿದ್ದಾರೆ. ಲೋಕಸಭೆಯಲ್ಲಿ ಅವರ ಹಾಜರಾತಿ ಶೇಕಡ 84 ಎಂಬುದು ಗಮನಾರ್ಹ. ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಆಪ್ತ ವಲಯದಲ್ಲಿ ಜಯದೇವ್ ಗಲ್ಲಾ ಒಬ್ಬರು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...