alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಲೆಯಲ್ಲಿ ರಾಷ್ಟ್ರಗೀತೆಯನ್ನೇ ಬ್ಯಾನ್ ಮಾಡಿದ ಆಡಳಿತ ಮಂಡಳಿ

india

ಅಲಹಾಬಾದ್: ಉತ್ತರ ಪ್ರದೇಶದ ಅಲಹಾಬಾದ್ ನಲ್ಲಿ ಆಘಾತಕಾರಿ ಬೆಳವಣಿಗೆಯೊಂದು ನಡೆದಿದೆ. ಇಲ್ಲಿನ ಪ್ರತಿಷ್ಠಿತ ಶಾಲೆಯೊಂದರಲ್ಲಿ ರಾಷ್ಟ್ರಗೀತೆಯನ್ನು ಹಾಡದಂತೆ ನಿಷೇಧಿಸಿ ಆಡಳಿತ ಮಂಡಳಿ ಆದೇಶ ಹೊರಡಿಸಿದೆ.

ರಾಷ್ಟ್ರಗೀತೆಯಲ್ಲಿ ‘ಭಾರತ ಭಾಗ್ಯ ವಿಧಾತ’ ಎಂಬ ಸಾಲುಗಳಿದ್ದು, ಅವು ಇಸ್ಲಾಂ ಧರ್ಮಕ್ಕೆ ವಿರುದ್ಧವಾಗಿದೆ. ಹಾಗಾಗಿ ತಮ್ಮ ಶಾಲೆಯಲ್ಲಿ ಯಾವುದೇ ಕಾರಣಕ್ಕೂ ರಾಷ್ಟ್ರಗೀತೆ ಹಾಡದಂತೆ ನಿಷೇಧ ಹೇರಲಾಗಿದೆ ಎಂದು ಶಾಲೆಯ ವ್ಯವಸ್ಥಾಪಕರು ತಿಳಿಸಿದ್ದಾರೆ. ಶಾಲೆಗಳು ಆರಂಭವಾಗುವುದೇ ಮಕ್ಕಳು ರಾಷ್ಟ್ರಗೀತೆ ಹೇಳಿದ ನಂತರ. ಮಕ್ಕಳಲ್ಲಿ ದೇಶ ಭಕ್ತಿಯ ಭಾವನೆಯನ್ನು ಮೂಡಿಸಲು ದಿನಾಲು ರಾಷ್ಟ್ರಗೀತೆ ಹೇಳಿಸಲಾಗುತ್ತದೆ. ಆದರೆ, ರಾಷ್ಟ್ರಗೀತೆಯನ್ನೇ ಬ್ಯಾನ್ ಮಾಡಿರುವುದು ಸರಿಯಲ್ಲ ಎಂಬ ಆಕ್ರೋಶ ವ್ಯಕ್ತವಾಗಿದೆ.

ಶಾಲೆಯಲ್ಲಿ ರಾಷ್ಟ್ರಗೀತೆ ಹಾಡದಂತೆ ನಿರ್ಬಂಧ ಹೇರಿರುವುದನ್ನು ವಿರೋಧಿಸಿ ಅನೇಕ ಶಿಕ್ಷಕರು ರಾಜೀನಾಮೆ ನೀಡಿದ್ದಾರೆ. ಆಡಳಿತ ಮಂಡಳಿಯ ನಿರ್ಧಾರಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಬಿ.ಜೆ.ಪಿ. ಮುಖಂಡ ಶ್ರೀಕಾಂತ್ ಶರ್ಮ ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...