alex Certify
ಕನ್ನಡ ದುನಿಯಾ       Mobile App
       

Kannada Duniya

ಬಿ.ಜೆ.ಪಿ. ಅಲೆಯಲ್ಲಿಯೂ ಯುವ ನಾಯಕರ ಶೈನಿಂಗ್

ದೇಶದ ಗಮನ ಸೆಳೆದಿದ್ದ ಗುಜರಾತ್ ವಿಧಾನಸಭೆ ಚುನಾವಣೆಯಲ್ಲಿ ಬಿ.ಜೆ.ಪಿ. ಭರ್ಜರಿ ಬಹುಮತದೊಂದಿಗೆ ಮತ್ತೆ ಅಧಿಕಾರಕ್ಕೆ ಬಂದಿದೆ. ನಿರಂತರವಾಗಿ 22 ವರ್ಷಗಳ ಕಾಲ ಅಧಿಕಾರ ನಡೆಸಿದ ಬಿ.ಜೆ.ಪಿ.ಗೆ ಈ ಬಾರಿ ಗೆಲುವು ಅಷ್ಟು ಸುಲಭವಾಗಿರಲಿಲ್ಲ.

ಗುಜರಾತ್ ನಲ್ಲಿ ಬಿ.ಜೆ.ಪಿ. ಪ್ರಾಬಲ್ಯದ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗಣನೀಯ ಸ್ಥಾನಗಳನ್ನು ಗಳಿಸಿದೆ. ಅಂಕಿ ಸಂಖ್ಯೆಗಳ ಲೆಕ್ಕಾಚಾರದಲ್ಲಿ ಬಿ.ಜೆ.ಪಿ. ಮೇಲುಗೈ ಸಾಧಿಸಿದೆ.

ಈ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಯುವ ನಾಯಕರಿಗೆ ಹೊರಗುತ್ತಿಗೆ ನೀಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು. ಬಿ.ಜೆ.ಪಿ.ಯಿಂದ ಈ ಬಾರಿ ದಲಿತರು, ಹಿಂದುಳಿದವರು, ಪ್ರಬಲ ಪಟೇಲ್ ಮತ್ತು ಪಾಟೀದಾರ್ ಸಮುದಾಯ ದೂರವಾಗಿದ್ದಾರೆ ಎಂದು ಹೇಳಲಾಗಿತ್ತು.

ಇದೇ ವೇಳೆ ಗುಜರಾತ್ ರಾಜಕೀಯದಲ್ಲಿ ಯುವ ನಾಯಕರು ತಮ್ಮದೇ ಆದ ಛಾಪನ್ನು ಮೂಡಿಸಿದ್ದರು. ಜಿಗ್ನೇಶ್ ಮೇವಾನಿ, ಅಲ್ಪೇಶ್ ಠಾಕೂರ್, ಹಾರ್ದಿಕ್ ಪಟೇಲ್ ರಂತಹ ಯುವ ನಾಯಕರು ತಮ್ಮ ಕ್ಷೇತ್ರಗಳಲ್ಲಿ ಬಿ.ಜೆ.ಪಿ. ಗೆಲುವಿಗೆ ಕಡಿವಾಣ ಹಾಕಿದ್ದಾರೆ.

ಇದೇ ಮೊದಲ ಬಾರಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಜಿಗ್ನೇಶ್ ಮೇವಾನಿ ಮತ್ತು ಅಲ್ಪೇಶ್ ಠಾಕೂರ್ ಜಯಗಳಿಸಿದ್ದು, ರಾಜಕಾರಣದಲ್ಲಿ ಎಲ್ಲವೂ ಸಾಧ್ಯವಿದೆ ಎಂದು ತೋರಿಸಿಕೊಟ್ಟಿದ್ದಾರೆ.

ರಾಧನ್ ಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಅಲ್ಪೇಶ್ ಠಾಕೂರ್, ವಡಗಾಂವ್ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಜಿಗ್ನೇಶ್ ಮೇವಾನಿ ಭರ್ಜರಿ ಜಯಗಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...